Saturday, August 1, 2026
Homeಸೂರ್ಯಗಗನನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ :...

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ : ಬಸವರಾಜ ಹೊರಟ್ಟಿ

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ : ಬಸವರಾಜ ಹೊರಟ್ಟಿ

ಬೆಂಗಳೂರು, ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಹಂಪಿಯ ವೈಭವ ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಬೆಂಗಳೂರು ನಗರ ಇಂದು ಬಹುವಾಗಿ ಬೆಳೆದು ಜಾಗತಿಕ ನಕ್ಷೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಕೆಂಪೇಗೌಡರು ನಿರ್ಮಿಸಿರುವ ಕೆರೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ. ಬೆಂದಕಾಳೂರು ಎಂಬ ನಾಮದಿಂದ ಕರೆಯುತ್ತಿದ್ದ ನಗರ ಇಂದು ಬೆಂಗಳೂರು ನಗರವಾಗಿ ರೂಪುಗೊಂಡಿದ್ದು, ಕೆಂಪೇಗೌಡರ ದೂರದೃಷ್ಟಿಯ ಫಲ ಎಂದು ಶ್ರೀ ಬಸವರಾಜ ಹೊರಟ್ಟಿ ಅಭಿಮಾನದಿಂದ ತಿಳಿಸಿದರು.

ಕೆಂಪೇಗೌಡರ ಬದುಕು, ಹೋರಾಟ ಅವರ ದೂರದೃಷ್ಟಿಯುಳ್ಳ ಪರಿಣಾಮಕಾರಿ ಆಡಳಿತ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೆಂಪೇಗೌಡರ ಅನುಯಾಯಿಯಾಗಿದ್ದು, ಅವರಿಂದ ಪ್ರೇರಣೆ ಪಡೆದು ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ, ಕೆಂಪೇಗೌಡರ ಹೆಸರನ್ನು ಸ್ವತಃ ತಮ್ಮ ಮಗನಿಗೆ ನಾಮಕರಣ ಮಾಡಿರುವ ಡಿ.ಕೆ. ಶಿವಕುಮಾರ್, ಕೆಂಪೇಗೌಡರ ಬಗೆಗೆ ತಮಗಿರುವ ಭಕ್ತಿ, ಶ್ರದ್ದೆ ಹಾಗೂ ಬದ್ಧತೆಯನ್ನು ಸಾಕ್ಷೀಕರಿಸಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಮಾನ ವ್ಯಕ್ತಪಡಿಸಿದರು.

ಸಾವಿರ ಕೆರೆಗಳ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸುವ ಕನಸು ಹೊತ್ತಿದ್ದ ಕೆಂಪೇಗೌಡರ ದೂರದರ್ಶಿತ್ವ ಇಂದು ನಮಗೆಲ್ಲರಿಗೂ ಮೇಲ್ಪಂಕ್ತಿಯಾಗಿದ್ದು ಕೆಂಪೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ, ಬೆಂಗಳೂರಿನ ಸೌಂದರ್ಯವನ್ನು ಉಳಿಸಿ ಅಚ್ಚುಕಟ್ಟಾಗಿ ಬೆಳೆಸುವ ಮೂಲಕ ಕೆಂಪೇಗೌಡರ ಕನಸನ್ನು ನನಸನ್ನಾಗಿಸುವುದು ನಾವೆಲ್ಲರೂ ನಾಡಪ್ರಭುಗಳಿಗೆ ಸಲ್ಲಿಸುವ ನೈಜ ಗೌರವವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮುಂದಡಿ ಇಟ್ಟಿದ್ದಾರೆ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I