Saturday, August 1, 2026
Homeಸೂರ್ಯಗಗನI ಹೆಣ್ಣುಮಕ್ಕಳಿಗೆ I ಶಿಕ್ಷಣದ ಅಗತ್ಯತೆ ಮತ್ತು I ಅನಿವಾರ್ಯತೆ ತಿಳಿಸುವುದು I ಆದ್ಯ ಕರ್ತವ್ಯವಾಗಿದೆ...

I ಹೆಣ್ಣುಮಕ್ಕಳಿಗೆ I ಶಿಕ್ಷಣದ ಅಗತ್ಯತೆ ಮತ್ತು I ಅನಿವಾರ್ಯತೆ ತಿಳಿಸುವುದು I ಆದ್ಯ ಕರ್ತವ್ಯವಾಗಿದೆ I ಶಿಕ್ಷಣ ಸಚಿವ ಮಧು ಬಂಗಾರಪ್ಪ I

I ಹೆಣ್ಣುಮಕ್ಕಳಿಗೆ I ಶಿಕ್ಷಣದ ಅಗತ್ಯತೆ ಮತ್ತು I ಅನಿವಾರ್ಯತೆ ತಿಳಿಸುವುದು I ಆದ್ಯ ಕರ್ತವ್ಯವಾಗಿದೆ I ಶಿಕ್ಷಣ ಸಚಿವ ಮಧು ಬಂಗಾರಪ್ಪ I

ಕೊಪ್ಪಳ  :  ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ “ಸರ್ಕಾರಿ ಬಾಲಕಿಯರ ಪ್ರೌಢಶಾಲೆ” ಹಾಗೂ “ಪದವಿ ಪೂರ್ವ ಕಾಲೇಜಿನ ಕೊಠಡಿ” ಗಳನ್ನು ಉದ್ಘಾಟಿಸಿ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಮಾತನಾಡಿದರು

ನಮ್ಮ ರಾಜ್ಯ ಸರ್ಕಾರ ಹೆಣ್ಣುಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ಅವರಿಗೆ ಶಿಕ್ಷಣದ ಅಗತ್ಯತೆ ಮತ್ತು ಅನಿವಾರ್ಯತೆಯನ್ನು ತಿಳಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು,

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಈಗಾಗಲೇ ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದೆ. ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಲು ಪೋಷಕರು ಪ್ರತಿದಿನ ತಪ್ಪದೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಶಿಕ್ಷಣದಿಂದಲೇ ಅವರ ಭವಿಷ್ಯ ಉಜ್ವಲವಾಗುವುದು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು,

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ  ಬಸವರಾಜ ರಾಯರೆಡ್ಡಿ ಅವರು ಹಾಗೂ ಮಾಜಿ ಶಾಸಕರಾದ  ಅಮರೇಗೌಡ ಬಯ್ಯಾಪುರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು, ಶಾಲಾ ಸಿಬ್ಬಂದಿ ವರ್ಗದವರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I