Saturday, August 1, 2026
Homeಸೂರ್ಯಗಗನಅಕ್ರಮ ಕಟ್ಟಡ I ತೆರವಿಗೆ ಶಾಸಕ ಚೆನ್ನಬಸಪ್ಪ ಆಗ್ರಹ I ಸರಕಾರಿ ಆಸ್ತಿ ಸಂರಕ್ಷಣೆಗೆ I...

ಅಕ್ರಮ ಕಟ್ಟಡ I ತೆರವಿಗೆ ಶಾಸಕ ಚೆನ್ನಬಸಪ್ಪ ಆಗ್ರಹ I ಸರಕಾರಿ ಆಸ್ತಿ ಸಂರಕ್ಷಣೆಗೆ I ಅಗತ್ಯ ಕ್ರಮಕ್ಕಾಗಿ ಒತ್ತಾಯ I

I ಅಕ್ರಮ ಕಟ್ಟಡ I ತೆರವಿಗೆ ಶಾಸಕ ಚೆನ್ನಬಸಪ್ಪ ಆಗ್ರಹ I ಸರಕಾರಿ ಆಸ್ತಿ ಸಂರಕ್ಷಣೆಗೆ I ಅಗತ್ಯ ಕ್ರಮಕ್ಕಾಗಿ ಒತ್ತಾಯ I

ಶಿವಮೊಗ್ಗ : ನಗರದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಶನಿವಾರ ನಡೆದ ಘಟನೆ ಸಂಬಂಧಿಸಿ, ಅನ್ಯಕೋಮಿನ ಕೆಲ ಕಿಡಿಗೇಡಿಗಳು ವಿಘ್ನವಿನಾಶಕ ಶ್ರೀ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು, ನಾಗರ ದೇವರ ವಿಗ್ರಹವನ್ನು ಚರಂಡಿಗೆ ಎಸೆದಿದ್ದಾರೆ. ಈ ಕ್ರೂರ ಕೃತ್ಯದಿಂದ ಹಿಂದೂ ಸಮುದಾಯದ ಭಾವನೆಗೆ ಗಂಭೀರ ಧಕ್ಕೆಯುಂಟಾಗಿದೆ ಎಂದು ಶಾಸಕರಾದ ಚೆನ್ಮಬಸಪ್ಪನವರು ಆಕ್ರೋಶ ವ್ಯಕ್ತಪಡಿಸಿದರು,

ಅವರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಿ  ಈ ಘಟನೆಗೆ ಸಂಬಂಧಿಸಿದಂತೆ ಶನಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಪಡೆಯಲಾಗಿತ್ತು, ಪರಿಶೀಲನೆಯ ವೇಳೆ, ಆರೋಪಿತ ವ್ಯಕ್ತಿ ಸರ್ಕಾರದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಾಣ ಹಂತದಲ್ಲಿರುವ ಮನೆ ಕಟ್ಟುತ್ತಿದ್ದನೆಂಬ ಮತ್ತು ಆ ಕಟ್ಟಡದಲ್ಲಿ ಇತ್ತೀಚೆಗೆ ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಸ್ಥಳೀಯರಿಂದ ಲಭಿಸಿದೆ ಎಂದು ತಿಳಿಸಿದರು,

ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಬಿಜೆಪಿ ಜಿಲ್ಲೆ ಹಾಗೂ ನಗರದ ಪ್ರಮುಖರೊಂದಿಗೆ ಮಹಾನಗರ ಪಾಲಿಕೆ ಆಯುಕ್ತರಾದ  ಮಾಯಣ್ಣ ಗೌಡರನ್ನು ಭೇಟಿ ಮಾಡಿ ಹಲವು ಮಹತ್ವದ ಬೇಡಿಕೆಗಳನ್ನು ತಿಳಿಸಲಾಯಿತು, ಎಂದು ಪತ್ರಕರ್ತರೊಂದಿಗೆ ವಿವರಿಸಿದರು,

ಅಕ್ರಮ ಕಟ್ಟಡ ತೆರವುಗೊಳಿಕೆ: ಆರೋಪಿ ನಿರ್ಮಿಸುತ್ತಿರುವ ಮನೆ ಸರ್ಕಾ:ರಿ ಜಾಗದಲ್ಲಿ ಇರುವುದರಿಂದ, ತಕ್ಷಣವೇ ಅಕ್ರಮ ಕಟ್ಟಡದ ವಿರುದ್ಧ ಕ್ರಮ ಕೈಗೊಂಡು ಅದನ್ನು ತೆರವುಗೊಳಿಸಬೇಕೆಂದು ಆಗ್ರಹಿಸಲಾಯಿತು.

ಸರ್ಕಾರಿ ಜಾಗದ ಸಂರಕ್ಷಣೆ: ಸಾರ್ವಜನಿಕರ ಉಪಯೋಗಕ್ಕಾಗಿ ಮೀಸಲಿಟ್ಟಿರುವ ಹಲವಾರು ಸರ್ಕಾರಿ ಜಾಗಗಳನ್ನು ಅನ್ಯ ಸಮುದಾಯದವರು ಅಕ್ರಮವಾಗಿ ಅತಿಕ್ರಮಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಎಲ್ಲ ಜಾಗಗಳಲ್ಲಿ ತಡೆಗೋಡೆ ಅಥವಾ ಬೇಲಿ ಹಾಕಿಸಿ, ಸ್ವಚ್ಛತೆಗೊಳಿಸಿ, ಪಾಲಿಕೆ ವಶಕ್ಕೆ ತರುವ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಧನಂಜಯ್ ಸರ್ಜಿ, ಜಿಲ್ಲೆ ಹಾಗೂ ನಗರದ ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ನಮ್ಮ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I