Sunday, August 2, 2026
Homeಸೂರ್ಯಗಗನI ಬಾನುಮುಷ್ತಾಕ್‌ರ I ಎದೆಯ ಹಣತೆ I ತೇಜಸ್ವಿ ಅವರ ಮಾಯಾಮೃಗ ನಾಟಕ ಪ್ರದರ್ಶನ I...

I ಬಾನುಮುಷ್ತಾಕ್‌ರ I ಎದೆಯ ಹಣತೆ I ತೇಜಸ್ವಿ ಅವರ ಮಾಯಾಮೃಗ ನಾಟಕ ಪ್ರದರ್ಶನ I ಹಾಸನದಲ್ಲಿ ಜುಲೈ 11ಕ್ಕೆ I

I ಬಾನುಮುಷ್ತಾಕ್‌ರ I
ಎದೆಯ ಹಣತೆ I ತೇಜಸ್ವಿ ಅವರ ಮಾಯಾಮೃಗ
ನಾಟಕ ಪ್ರದರ್ಶನ I ಹಾಸನದಲ್ಲಿ ಜುಲೈ 11ಕ್ಕೆ I

ಬೆಂಗಳೂರು : ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಮತ್ತು ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಮಾಯಾಮೃಗ ನಾಟಕ ಪ್ರದರ್ಶನವನ್ನು ಜುಲೈ 11ರಂದು ಶುಕ್ರವಾರ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ.

ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ.
ಇದೇ ಸಂದರ್ಭದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರನ್ನು ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಭಿನಂದಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮವನ್ನು ಶಾಸಕ ಎಚ್.ಪಿ.ಸ್ವರೂಪ್ ಉದ್ಘಾಟಿಸಲಿದ್ದಾರೆ.
ಜಿಪಂ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು,  ರಂಗಸಿರಿ ಅಧ್ಯಕ್ಷ ಕೆ.ರಂಗಸ್ವಾಮಿ, ಕಾರ್ಯದರ್ಶಿ ಪಿ.ಶಾಡ್ರಾಕ್, ಖಜಾಂಚಿ ಡಿ.ಎಸ್.ಲೋಕೇಶ್ ಮತ್ತಿತರರು ಭಾಗವಹಿಸುವರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I