Monday, August 3, 2026
Homeಸೂರ್ಯಗಗನI ಭೂಸ್ವಾಧೀನ ಪ್ರಕ್ರಿಯೆಯನ್ನು I ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ I ಮುಖ್ಯಮಂತ್ರಿ ಸಿದ್ದರಾಮಯ್ಯ I

I ಭೂಸ್ವಾಧೀನ ಪ್ರಕ್ರಿಯೆಯನ್ನು I ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ I ಮುಖ್ಯಮಂತ್ರಿ ಸಿದ್ದರಾಮಯ್ಯ I

I ಭೂಸ್ವಾಧೀನ ಪ್ರಕ್ರಿಯೆಯನ್ನು I ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ I ಮುಖ್ಯಮಂತ್ರಿ ಸಿದ್ದರಾಮಯ್ಯ I

ಬೆಂಗಳೂರು,  : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ರೈತರ ಪರವಾಗಿ ನಿಲ್ಲುವ ಭರವಸೆ ನೀಡಿದ್ದೆ. ಅದರಂತೆ ಇಂದು ನಾನು ನುಡಿದಂತೆ ನಡೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ದರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ತಿಳಿಸಿದರು.

ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸಹಕಾರ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಂಡು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು. 1777 ಎಕರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವ ಉದ್ದೇಶ ಸರ್ಕಾರ ಹೊಂದಿದೆ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಬಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರಾದ ಎಂ.ಬಿ.ಪಾಟೀಲ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯೆ ಸಚಿವರಾದ ಹೆಚ್.ಕೆ.ಪಾಟೀಲ್, ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಇಲಾಖೆ ಸಚಿವರಾದ  ಬಿ.ಎಸ್. ಸುರೇಶ್ (ಭೈರತಿ), ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೆÇನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I