Monday, August 3, 2026
Homeಸೂರ್ಯಗಗನI 14ಕೋಟಿ ವೆಚ್ಚದಲ್ಲಿ ತಂದೆ-ತಾಯಿ I ಹೆಸರಲ್ಲಿ ಸರ್ಕಾರಿ ಶಾಲೆಗೆ I ಹೈಟೆಕ್ ಸ್ಪರ್ಶ I...

I 14ಕೋಟಿ ವೆಚ್ಚದಲ್ಲಿ ತಂದೆ-ತಾಯಿ I ಹೆಸರಲ್ಲಿ ಸರ್ಕಾರಿ ಶಾಲೆಗೆ I ಹೈಟೆಕ್ ಸ್ಪರ್ಶ I ಸಚಿವ ಮಧು ಬಂಗಾರಪ್ಪ I

I 14ಕೋಟಿ ವೆಚ್ಚದಲ್ಲಿ ತಂದೆ-ತಾಯಿ I ಹೆಸರಲ್ಲಿ ಸರ್ಕಾರಿ ಶಾಲೆಗೆ I ಹೈಟೆಕ್ ಸ್ಪರ್ಶ I ಸಚಿವ ಮಧು ಬಂಗಾರಪ್ಪ I

ಬೆಂಗಳೂರು : ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ‌ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು ‌14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ ಅಭಿವೃದ್ದಿಪಡಿಸಿರುವ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ” ಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಭಾಗವಹಿಸಿ,
ಪರಮಪೂಜ್ಯ  ಶ್ರೀಶ್ರೀಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ,  ಉಪಮುಖ್ಯಮಂತ್ರಿಗಳಾದ  ಡಿ.ಕೆ ಶಿವಕುಮಾರ್ ಅವರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ,
ಡಾ.ಹೆಚ್.ಎಂ ವೆಂಕಟಪ್ಪ ಅವರ ನಿಸ್ವಾರ್ಥ ಸೇವೆ ಹಾಗೂ ದೂರದೃಷ್ಟಿ ಕಲ್ಪನೆ ಇಂದು ನಮಗೆಲ್ಲ ಮಾದರಿಯಾಗಿದೆ. ತಮ್ಮ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ವಿದ್ಯಾವಂತರಾಗಿ ತಮ್ಮ ಬದುಕನ್ನ ರೂಪಿಸಿಕೊಳ್ಳಬೇಕೆಂಬ ಸದುದ್ದೇಶದಿಂದ 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಂಗಲೂರು ಗ್ರಾಮದ ಶಾಲೆಗೆ ಹೊಸರೂಪ ಕಲ್ಪಿಸಿದ್ದಾರೆ. ಅವರ ಈ ಕಾರ್ಯಕ್ಕೆ ಹೃದಯಪೂರ್ವಕ ಅಭಿನಂದನೆಗಳು. ಹೃದಯ ಶ್ರೀಮಂತರಾದ ಡಾ.ಹೆಚ್.ಎಂ ವೆಂಕಟಪ್ಪ ಅವರಿಗೆ ಇನ್ನಷ್ಟು ಸಮಾಜಮುಖಿ ಕೆಲಸ ಮಾಡಲು ಭಗವಂತ ಆಯುರಾರೋಗ್ಯ ನೀಡಲಿ ಎಂದು ಶುಭಹಾರೈಸಿದರು

ನಂತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಈ ಕಟ್ಟಡಕ್ಕೆ ಸಹಕರಿಸಿದವರಿಗೆ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿಗಳಾದ  ಬಸವರಾಜ ಹೊರಟ್ಟಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಪಿ ಯೋಗೇಶ್ವರ್, ವಿಧಾನಪರಿಷತ್ ಸದಸ್ಯರಾದ ಎಸ್. ರವಿ,  ಪುಟ್ಟಣ್ಣ, ಸಂಸದರಾದ ಸಿ.ಎನ್ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು, ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಣ್ವ ಫೌಂಡೇಶನ್ ನ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮುದ್ದು ಮಕ್ಕಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I