Saturday, August 1, 2026
Homeಸೂರ್ಯಗಗನI ರಾಜ್ಯ ಸರ್ಕಾರದ I ಆರ್ಥಿಕ ದಿವಾಳಿತನದ I ಮತ್ತೊಂದು ವೈಫಲ್ಯ I ಡಿ.ಎಸ್‌ ಅರುಣ್‌

I ರಾಜ್ಯ ಸರ್ಕಾರದ I ಆರ್ಥಿಕ ದಿವಾಳಿತನದ I ಮತ್ತೊಂದು ವೈಫಲ್ಯ I ಡಿ.ಎಸ್‌ ಅರುಣ್‌

I ರಾಜ್ಯ ಸರ್ಕಾರದ I ಆರ್ಥಿಕ ದಿವಾಳಿತನದ I ಮತ್ತೊಂದು ವೈಫಲ್ಯ I ಡಿ.ಎಸ್‌ ಅರುಣ್‌

ಶಿವಮೊಗ್ಗ : ಕೇಂದ್ರ ಸರ್ಕಾರದ ಮೂಲಭೂತ ಅನುದಾನ ೧೫ ನೇ ಹಣಕಾಸು ಆಯೋಗದ ೨೦೨೪-೨೫ ನೇ ಸಾಲಿನ ಅನುದಾನ ಬಿಡುಗಡೆಗೊಂಡಿದ್ದರೂ ಇಲ್ಲಿಯವರೆಗೂ ರಾಜ್ಯ ಸರ್ಕಾರವು ಸದರಿ ೧೫ ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಗೊಳಿಸುವಲ್ಲಿ ತಡವರಿಸುತ್ತಿದೆ ವಿಧಾನ ಪರಿಷತ್ತಿನ ಶಾಸಕರಾದ ಡಿ.ಎಸ್ ಅರುಣ್ ತಿಳಿಸಿದರು

ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದಂತೆ ಕರ್ನಾಟಕ ರಾಜ್ಯ ೬೫೦೦ ಕ್ಕೂ ಹೆಚ್ಚಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲಭೂತ ಅಭಿವೃದ್ಧಿ ಕೆಲಸಗಳಾದ ಕೃಷಿ ತೋಟಗಾರಿಕೆ, ರೇಷ್ಮೇ ಬೆಳೆಗಳ ಉತ್ಪಾದನೆ ಹೆಚ್ಚಳ ಮಾಡಲು, ಬಡತನ ನಿರ್ಮೂಲನ ಕಾರ್ಯಕ್ರಮ ಅನುಷ್ಟಾನ, ಪ್ರಾಥಮಿಕ ಪ್ರೌಢ ಶಿಕ್ಷಣಕ್ಕೆ ಸಂಬಂಧಿಸಿದ ಮೂಲ ಸೌಕರ್ಯ ಅಭಿವೃದ್ಧಿ, ಆರೋಗ್ಯ ಇಲಾಖೆ, ಮೂಲಭೂತ ಸೌಕರ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಅನುದಾನ ವಿನಿಯೋಗಿಸುವ ಸಲುವಾಗಿ ಬಿಡುಗಡೆ ಮಾಡಲಾಗುವುದು. ಆದರೆ ರಾಜ್ಯ ಸರ್ಕಾರದ ಅಧಿಕಾರಿಗಳ ನಿರ್ಲಕ್ಷದಿಂದ ಸದರಿ ಮೂಲ ಅನುದಾನ ಅನಿರ್ಬಂಧಿತ ( Untied Fund ) ಶೇಕಡ ೪೦ರಷ್ಟು ಹಂಚಿಕೆಯನ್ನು ಉದಾಸೀನತೆಯಿಂದ ನಿರ್ಬಂಧಿತ ಅನುದಾನ (Tied Fund) ಹಂಚಿಕೆಯಲ್ಲಿ ಬದಲುಗೊಳಿಸಿ, ಹಂಚಿಕೆ ಮಾಡಿ, ಅನಿರ್ಬಂಧಿತ (Untied Fund) ಶೇಕಡ ೪೦ರಷ್ಟು ಹಂಚಿಕೆ ಹಣದಿಂದ ಆಗಬೇಕಾಗಿರುವ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಿ, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮವಹಿಸದೇ ಇರುವುದು ಶೋಚನೀಯ ಸಂಗತಿಯಾಗಿರುತ್ತದೆ ಎಂದು ಅವರು ವಿವರಿಸಿದರು

ಆದ್ದರಿಂದ ಈ ಅನುದಾನ ಹಂಚಿಕೆಯಲ್ಲಿ ಮಾಡಿರುವ ಉದಾಸೀನತೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೋಂಡು ಆಗಿರುವ ಲೋಪವನ್ನು ಕೂಡಲೇ ಸರಿಪಡಿಸಿ, ರಾಜ್ಯಾದ್ಯಂತ ೬೫೦೦ ಕ್ಕೂ ಹೆಚ್ಚಿನ ಪಂಚಾಯಿತಿಗಳಿಗೆ ಒದಗಬೇಕಾದ ಮೂಲ ಅನುದಾನ ಅನಿರ್ಬಂಧಿತ (Untied Fund) ಶೇಕಡ ೪೦ರಷ್ಟು ಹಂಚಿಕೆಯನ್ನು ಅನುದಾನವನ್ನು ಬಿಡುಗಡೆಗೊಳಿಸಿ ಆದೇಶಿಸುವಂತೆ ರಾಜ್ಯ ಸರ್ಕಾರವನ್ನು
ವಿಧಾನ ಪರಿಷತ್ತಿನ ಶಾಸಕರಾದ ಡಿ.ಎಸ್ ಅರುಣ್ ರವರು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I