Saturday, August 1, 2026
Homeಸೂರ್ಯಗಗನI ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರ ಭೇಟಿ I ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ I

I ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರ ಭೇಟಿ I ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ I

I ಜೆಸಿಐ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರ ಭೇಟಿ I ವಿವಿಧ ಸಮಾಜಮುಖಿ ಕಾರ್ಯಗಳಿಗೆ ಚಾಲನೆ I
ಶಿವಮೊಗ್ಗ :  ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಅಂಕುರ್ ಜುನ್ ಜುನ್ವಾಲ ರವರು ವಲಯ ಜು. 23ಕ್ಕೆ ಜಿಲ್ಲೆಗೆ ಅಧಿಕೃತ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ 11ಕ್ಕೆ ವಿಮಾನ ನಿಲ್ದಾಣದಿಂದ ಸರ್ಕಾರಿ ನೌಕರರ ಭವನದವರೆಗೆ ಕಾರು ಮತ್ತು ಬೈಕ್ ಜಾಥದ ಮೂಲಕ ಸ್ವಾಗತಿಸಲಾಗುವುದು ಎಂದು ಜೆಸಿಐ ಶಿವಮೊಗ್ಗ ಅಧ್ಯಕ್ಷ ಜಿ. ಗಣೇಶ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜಿನ ಎಲ್ಲಾ ವಿಭಾಗಗಳ ಸಹಯೋಗದೊಂದಿಗೆ ಕಾಲೇಜಿನ ಮುಂಭಾಗದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಜವಾಬ್ದಾರಿಗಳ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಶಿವಮೊಗ್ಗೆಯ ಹೊರವಲಯದಲ್ಲಿ ಪುರ ಪ್ರವೇಶಿಸುವ ಸ್ಥಳದಲ್ಲಿ ಜೆಸಿ ಶಿವಮೊಗ್ಗ ರಾಯಲ್ಸ್ ಮತ್ತು ಜೇಸಿ ಶಿವಮೊಗ್ಗ ಭಾವನಾ ವತಿಯಿಂದ ಸ್ವಾಗತದ ನಾಮಫಲಕ ಅನಾವರಣ, ಜೇಸಿಐ ಸಮೃದ್ಧಿ ವತಿಯಿಂದ ಪೋಲೀಸ್ ಬ್ಯಾರಿಕೇಡ್ ಕೊಡುಗೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದ ಅವರು, ಜೆಸಿಐ ವತಿಯಿಂದ ನಾಯಕತ್ವ ತರಬೇತಿ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.
ಜೆಸಿ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಈಗಾಗಲೇ ರಕ್ತದಾನ ಶಿಬಿರಗಳು, ಪರಿಣಾಮಕಾರಿ ಭಾಷಣ ಕಲೆ, ನೇತ್ರ ತಪಾಸಣಾ ಶಿಬಿರಗಳು, ಶಾಲಾ ಕಾಲೇಜುಗಳಲ್ಲಿ ವ್ಯಕ್ತಿತ್ವ ವಿಕಸನ, ಅರ್ಹರಿಗೆ ಆಹಾರ ಸಾಮಗ್ರಿಗಳ ಕೊಡುಗೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗಿದೆ ಎಂದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ 22 ಜೇಸಿ ಘಟಕಗಳಿದ್ದು, ಎಲ್ಲವೂ ಸಹ ಸಕ್ರಿಯವಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ರಾಷ್ಟ್ರೀಯ ಅಧ್ಯಕ್ಷರ ಭೇಟಿಯ ಹಿನ್ನೆಲೆಯಲ್ಲಿ 12 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಘಟಕಗಳ ಅಧ್ಯಕ್ಷರುಗಳೊಂದಿಗೆ ಸಭೆ ನಡೆಯಲಿದ್ದು, ಮುಖ್ಯ ಅತಿಥಿಯಾಗಿ  ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಅಂಕುರ್ ಜುನ್ ಜುನ್ವಾಲ ಪಾಲ್ಗೊಳ್ಳಲಿದ್ದು, ವಲಯ ೨೪ರ ಅಧ್ಯಕ್ಷರಾದ ಜೆಸಿಐ ಸೆನೆಟರ್ ಸಿ.ಎ. ಗೌರೀಶ್ ಭಾರ್ಗವ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದ ಅವರು, ವಲಯ ೨೪ರ ಎಲ್ಲಾ ಉಪಾಧ್ಯಕ್ಷರುಗಳು, ರಾಷ್ಟ್ರೀಯ ಅಧ್ಯಕ್ಷರ ಟೂರ್ ಡೈರೆಕ್ಟರ್ ಸುದರ್ಶನ್ ತಾಯಿ ಮನೆ, ವಲಯ ಉಪಾಧ್ಯಕ್ಷ   ಶಿವಮೊಗ್ಗ ಜಿಲ್ಲೆಯ ಎಲ್ಲಾ ಘಟಕದ ಅಧ್ಯಕ್ಷರುಗಳು ಉಪಸ್ಥಿತರಿರಲಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಎಸ್. ಎಂ. ಸ್ವಾತಿ, ಶಿಲ್ಪಾ ಸತೀಶ್, ಜಿ. ವಿಜಯಕುಮಾರ್, ಗಣೇಶ್ ಪೈ, ನವೀನ್ ತಲಾರಿ, ನಿವೇದಿತಾ ವಿಕಾಸ್, ಸ್ಮಿತಾ ಮೋಹನ್, ರೇಖಾ ರಂಗನಾಥ್, ರುದ್ರೇಶ್ ಕೋರಿ, ಎನ್. ಶಿಲ್ಪಾ, ಮಧುಸೂಧನ ನಾವಡ ಮೊದಲಾದವರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I