Saturday, August 1, 2026
Homeಸೂರ್ಯಗಗನI ವಿಶೇಷ ಘಟಕ,ಗಿರಿಜನ ಯೋಜನೆಗಳಿಂದ I ಕಲಾವಿದರಿಗೆ ಪ್ರೋತ್ಸಾಹ I ಹೆಚ್.ಉಮೇಶ್ I

I ವಿಶೇಷ ಘಟಕ,ಗಿರಿಜನ ಯೋಜನೆಗಳಿಂದ I ಕಲಾವಿದರಿಗೆ ಪ್ರೋತ್ಸಾಹ I ಹೆಚ್.ಉಮೇಶ್ I

I ವಿಶೇಷ ಘಟಕ,ಗಿರಿಜನ ಯೋಜನೆಗಳಿಂದ I ಕಲಾವಿದರಿಗೆ ಪ್ರೋತ್ಸಾಹ I ಹೆಚ್.ಉಮೇಶ್ I

ಶಿವಮೊಗ್ಗ, : ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ಪರಿಶಿಷ್ಟ ಜಾತಿ/ಪಂಗಡದ ಕಲಾವಿದರು ಮತ್ತು ಸಂಸ್ಥೆಗಳಿಗೆ ಕಲೆ-ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ತಿಳಿಸಿದರು,


ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಭದ್ರಾವತಿ ನಗರದ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಆಯೋಜಿಸಿದ್ದ ಮಹಿಳಾ ಡೊಳ್ಳು ಕುಣಿತ ಹಾಗೂ ಜನಪದ/ರಂಗಗೀತೆಗಳ ಕಲಾ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ವಾರದಲ್ಲಿ ಮೂರು ದಿನ, 6 ತಿಂಗಳ ಕಾಲ 25 ಜನ ಪರಿಶಿಷ್ಟ ಜಾತಿಯ ಕಲಾವಿದರಿಗೆ ಡೊಳ್ಳು ಕುಣಿತ ತರಬೇತಿ ನೀಡಲಾಗುತ್ತಿದೆ. ಗಂಡು ಕಲೆಯೆಂದೇ ಹೆಸರಾಗಿರುವ ಡೊಳ್ಳು ಕುಣಿತದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರು ಆಸಕ್ತಿ ತೋರಿ ಕಲಿಯುತ್ತಿರುವುದು ವಿಶೇಷವಾಗಿದೆ. ಹಾಗೂ 15 ಜನರಿಗೆ ಜಾನಪದ ಗೀತೆ ಮತ್ತು ರಂಗಗೀತೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಸ್ವಾಗತ ಭಾಷಣ ಮಾಡಿದರು.

ಡೊಳ್ಳು ಕಲೆಯ ಬಗ್ಗೆ ಹಿರಿಯ ಡೊಳ್ಳು ಕಲಾವಿದರಾದ ಹೆಗ್ಗೋಡಿನ ಪಣಿಯಮ್ಮ ಹಾಗೂ ಮಂಜು ರಂಗಾಯಣ ಇವರು ರಂಗಗೀತೆ/ ಜಾನಪದ ಗೀತೆಗಳ ಬಗ್ಗೆ ಮಾಹಿತಿಯನ್ನು ಮಾಹಿತಿ ನೀಡಿದರು. ನಿಲಯ ಪಾಲಕರಾದ ಶೀಲಾ ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿಗಳು, ಇಲಾಖೆ ಸಿಬ್ಬಂದಿಗಳು, ಪೋಷಕರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I