Saturday, August 1, 2026
Homeಸೂರ್ಯಗಗನI ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು I ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು I ಬಿಲ್ಕೀಶ್ ಬಾನು I

I ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು I ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು I ಬಿಲ್ಕೀಶ್ ಬಾನು I

I ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು I ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು I ಬಿಲ್ಕೀಶ್ ಬಾನು I

ಬೆಂಗಳೂರು : ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಬಿಲ್ಕೀಶ್ ಬಾನು ಕರೆ ನೀಡಿದರು.

ನಗರದ ಕಸ್ತೂರಬಾ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ 516 ನೇ ಕೆಂಪೇಗೌಡರ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬೆಂಗಳೂರು ಜಗತ್ತಿನಲ್ಲಿಯೇ ಹೆಸರುವಾಸಿಯಾಗಿದೆ, ಇಂತಹ ಬೆಂಗಳೂರನ್ನು ದೂರದೃಷ್ಟಿಯಿಂದ ನಿರ್ಮಿಸಿದ ಕೆಂಪೇಗೌಡರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ, ರಾಜಧಾನಿ ನಿರ್ಮಾಣದಲ್ಲಿ ಅಳವಡಿಸಿದ್ದ ಶಿಸ್ತು, ದೂರ ದೃಷ್ಟಿ ಎಲ್ಲರಿಗೂ ಪ್ರೇರಣದಾಯಕ ಎಂದರು. ಬೆಂಗಳೂರಿನಲ್ಲಿ ವೃತ್ತಿಗಳಿಗೆ ಅನುಸಾರವಾಗಿ ಪ್ರತಿಯೊಂದು ಸ್ಥಳಗಳನ್ನು ಗುರುತಿಸಿ ಕಿಸ್ತುಬದ್ಧವಾಗಿ ಬೆಳೆಸಲಾಯಿತು ಅವುಗಳು ಇಂದು ಬೇರೆ ಬೇರೆ ಹೆಸರುಗಳಿಂದ ಹೆಸರುವಾಸಿಯಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಸರ್ಕಾರಿ ಪ್ರೌಢಶಾಲಾ , ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಕವನ ವಾಚನ, ರಸಪ್ರಶ್ನೆ ಪ್ರಬಂಧ ,ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನ ಚರಿತ್ರೆ ಆಧಾರಿತ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರೆಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಸಿಎಸ್ ಚಂದ್ರ ಭೂಪಾಲ್, ತಾಲೂಕು ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಧು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್ ತಾಲೂಕು ಉಪ ತಹಶೀಲ್ದಾರ್ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಪ್ರಾಸ್ತವಿಕವಾಗಿ ಮಾತನಾಡಿದರು .ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶಂಕರ್ ನಿರೂಪಿಸಿದರು .ಶಿಕ್ಷಣ ಸಂಯೋಜಕ ಕಲ್ಲೇಶ್ ಸ್ವಾಗತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I