Sunday, August 2, 2026
Homeಸೂರ್ಯಗಗನI ಪತ್ರಕರ್ತರು ಸತ್ಯವನ್ನು ಬರೆದರೆ ಸಾಕು I ಎನ್ ಚೆಲುವರಾಯಸ್ವಾಮಿ I

I ಪತ್ರಕರ್ತರು ಸತ್ಯವನ್ನು ಬರೆದರೆ ಸಾಕು I ಎನ್ ಚೆಲುವರಾಯಸ್ವಾಮಿ I

I ಪತ್ರಕರ್ತರು ಸತ್ಯವನ್ನು ಬರೆದರೆ ಸಾಕು I ಎನ್ ಚೆಲುವರಾಯಸ್ವಾಮಿ I

ಪತ್ರಕರ್ತರಾದವರು ನಿಷ್ಪಕ್ಷಪಾತವಾಗಿ ಸತ್ಯವನ್ನು ಬರೆದರೆ ಸಾಕು ಸಮಾಜಕ್ಕೆ ಅದು ಸಹಕಾರಿಯಾಗುತ್ತದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.

ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೆ.ಆರ್.ಎಸ್ ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ನಿವೃತ್ತ ಪತ್ರಕರ್ತರಿಗೆ ಜೀವನ ನಡೆಸಲು ಹದಿನೈದು ಸಾವಿರ ಮಾಶಾಸನ ನೀಡಲಾಗುತ್ತಿದೆ. ಇಂದು ಇಂಜಿನಿಯರಿಂಗ್ ಪದವಿ ಪಡೆದವರು ಸಹ ಹತ್ತು ಹದಿನೈದು ಸಾವಿರ ಕೆಲಸ ಮಾಡುತ್ತಿದ್ದಾರೆ, ಹದಿನೈದು ಸಾವಿರ ಕಡಿಮೆ ಮೊತ್ತವಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಎಲ್ಲ ಸಾರ್ವಜನಿಕರಿಗೂ ಪಂಚ ಗ್ಯಾರಂಟಿ ಯೋಜನೆಯನ್ನು ನೀಡಲಾಗುತ್ತಿದೆ. ಜೊತೆಗೆ ಗ್ರಾಮೀಣ ಭಾಗದ ಪತ್ರಕರ್ತರಿಗೆ 35 ವರ್ಷಗಳ ಸೇವೆಯ ನಂತರ ಬಸ್ ಪಾಸ್ ಉಚಿತವಾಗಿ ನೀಡಲಾಗುತ್ತಿದೆ. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಇಷ್ಟು ಸಾಕು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಮತ್ತು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ರವರು ಪತ್ರಕರ್ತರ ಹಿತರಕ್ಷಣೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಕರ್ತರು ತಮ್ಮ ಅಸ್ತಿತ್ವವನ್ನು ಹಾಗೂ ಪತ್ರಿಕಾ ಧರ್ಮವನ್ನು ಉಳಿಸಿಕೊಂಡು ಹೊಗುವ ಜವಾಬ್ದಾರಿ ನಿಮ್ಮ ಮೇಲಿದೆ. ಸಮಾಜ, ರಾಜಕೀಯವನ್ನು ಒಳ್ಳೆಯ ದಾರಿಗೆ ತೆಗೆದುಕೊಂಡು ಹೊಗುವ ಹಾಗೂ ತಪ್ಪು ಗಳನ್ನು ತಿದ್ದಿ ಸರಿದಾರಿಗೆ ತರುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಅದನ್ನು ನಿಷ್ಪಕ್ಷಪಾತವಾಗಿ ವರದಿ ಮಾಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಕೆವಿ ಪ್ರಭಾಕರ್,ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ಶಾಸಕರಾದ ರವಿಕುಮಾರ್ ಗಣಿಗ,ಚಿತ್ರನಟ ಸಾದುಕೋಕಿಲ,ಜೆಡಿಎಸ್,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫ್ರುಲ್ಲಾಖಾನ್,IFWJ ಅಪರ ಪ್ರಧಾನ ಕಾರ್ಯದರ್ಶಿ ಹೆಜ್ ಬಿ ಮದನ್ ಗೌಡ,ಜಿಲ್ಲಾಧಿಕಾರಿ ಡಾ.ಕುಮಾರ್,ಸಿಇಒ ಕೆ ಆರ್ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರಾಜ್ಯ ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್,ಸೋಮಶೇಖರ್ ಕೆರಗೋಡು,ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I