I ಪದವೀಧರ ವಿಭಾಗದ ಅಧ್ಯಕ್ಷರಾಗಿ I ವೈ.ನಾಗೇಂದ್ರ ನೇಮಕ I
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಪದವೀಧರ ವಿಭಾಗದ ಅಧ್ಯಕ್ಷರಾಗಿ ವೈ.ನಾಗೇಂದ್ರ ಅವರನ್ನು ನೇಮಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಅನುಮೋದನೆ ಮೇರೆಗೆ ಈ ನೇಮಕ ಮಾಡಲಾಗಿದೆ.
ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತ, ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯ ಸಮಿತಿಯ ಮಾರ್ಗದರ್ಶನದಲ್ಲಿ ಪದವೀಧರ ವಿಭಾಗದ ಸಂಘಟನೆ ಬಲಪಡಿಸಿ ಮತ್ತು ಈ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಎನ್.ಎಂ.ನಾಗರಾಜ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

