I ದಕ್ಷಿಣ ವಲಯದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ I ಚಿನ್ನ ಮತ್ತು ಕಂಚಿನ ಪದಕ ಪಡೆದು ಶಿವಮೊಗ್ಗ ನಗರಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿ I
I ದಕ್ಷಿಣ ವಲಯದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ I ಚಿನ್ನ ಮತ್ತು ಕಂಚಿನ ಪದಕ ಪಡೆದು ಶಿವಮೊಗ್ಗ ನಗರಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿ I
ಶಿವಮೊಗ್ಗ: ಗೋಪಾಲಗೌಡ ಬಡಾವಣೆಯ ಅನುಪಿನಕಟ್ಟೆ ರಸ್ತೆಯಲ್ಲಿರುವ ಪ್ರತಿಷ್ಠಿತ ಪೋದಾರ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯಾದ ಅದ್ವಿಕಾ ನಾಯರ್, ಕೇರಳದ ಪಾಲಕ್ಕಾಡಿನಲ್ಲಿ ನಡೆದ ಸಿ.ಬಿ.ಎಸ್.ಇ. ದಕ್ಷಿಣ ವಲಯದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಒನ್ ಲ್ಯಾಪ್ ರೋಡ್ ರೇಸ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಹಾಗೆಯೇ, ೧೦೦೦ ಮೀಟರ್ ರಿಂಕ್ ರೇಸ್‌ನಲ್ಲಿ ಚಿನ್ನದ ಪದಕವನ್ನು ಗೆಲ್ಲುವುದರ ಮೂಲಕ ಮುಂದಿನ ಹಂತವಾಗಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ, ನಗರ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ನಮ್ಮ ಶಾಲೆಯ ಪ್ರಾಂಶುಪಾಲರಾದ ಡಾ. ಸರೋಜಾ ಬಿ ಶಿಳ್ಳಿನ್ ಹಾಗೂ ದೈಹಿಕ ಶಿಕ್ಷಕರಾದ ರಾಜು ಮತ್ತು ಆಡಳಿತ ಮಂಡಳಿಯವರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.