I ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ I ನವರಾತ್ರಿ ಸಂಭ್ರಮ I
ಶಿವಮೊಗ್ಗ, : ಶರಾವತಿ ನಗರದ ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ 22 ರಿಂದ 02 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ಜರುಗಲಿವೆ.ಸಂಜೆ ದುರ್ಗಾಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ 6:15 ರಿಂದ 7:20 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮಿಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸೆ, 30 ರಂದು ಬೆಳಿಗ್ಗೆ 7 ರಿಂದ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ,02 ರ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ.ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

