Saturday, August 1, 2026
Homeಸೂರ್ಯಗಗನI ನ.9ಕ್ಕೆ ಕೆಯುಡಬ್ಲ್ಯೂಜೆ ಚುನಾವಣೆ I ಮುಖ್ಯ ಚುನಾವಣಾಧಿಕಾರಿ I

I ನ.9ಕ್ಕೆ ಕೆಯುಡಬ್ಲ್ಯೂಜೆ ಚುನಾವಣೆ I ಮುಖ್ಯ ಚುನಾವಣಾಧಿಕಾರಿ I

I ನ.9ಕ್ಕೆ ಕೆಯುಡಬ್ಲ್ಯೂಜೆ ಚುನಾವಣೆ I ಮುಖ್ಯ ಚುನಾವಣಾಧಿಕಾರಿ I
ಬೆಂಗಳೂರು :  ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ *”ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka union of working journalists) ” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ.
ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.

ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ )ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು -09 ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I