Sunday, August 2, 2026
Homeಸೂರ್ಯಗಗನI ಡಾ. ಶೈಲಜಾ. ಹೊಸಳ್ಳೇರ ಅವರಿಗೆ I ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ I

I ಡಾ. ಶೈಲಜಾ. ಹೊಸಳ್ಳೇರ ಅವರಿಗೆ I ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ I

I ಡಾ. ಶೈಲಜಾ. ಹೊಸಳ್ಳೇರ ಅವರಿಗೆ I ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ I

ಬೆಂಗಳೂರು : ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ  ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ  ದವರು ಏರ್ಪಡಿಸಿದ್ದ ವಿದ್ಯಾ ವಾಚಸ್ಪತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಶೈಲಜಾ. ಹೊಸಳ್ಳೇರ , ಪ್ರಾಂಶುಪಾಲರು ಸರ್ ಎಂ ವಿಶ್ವೇಶ್ವರಯ್ಯ ಕಲಾ, ವಾಣಿಜ್ಯ ಕಾಲೇಜು ಭದ್ರಾವತಿ ಇವರಿಗೆ ವಿದ್ಯಾ ವಾಚಸ್ಪತಿ  ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು,

ಇವರು ೩೫ವರ್ಷಗಳಿಂದ ಕನ್ನಡ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ, ಸಂಸ್ಕೃತಿ ಬೋಧಿಸಿ ಸಲ್ಲಿಸಿದ ಸಾರ್ಥಕ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ, ಡಾ. ಶೈಲಜಾ ಅವರು ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ನಿರ್ವಹಿಸುತ್ತಿದ್ದು ಕು. ವಿ.ವಿ. ಕನ್ನಡ ಅಧ್ಯಯನ ಮಂಡಳಿ ಸದಸ್ಯರಾಗಿ, ಕನ್ನಡ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದು, ಬೋಧನೆ ಜೊತೆಗೆ ಹಲವಾರು ಪುಸ್ತಕ ಗಳನ್ನು ಪ್ರಕಟಿಸಿದ್ದಾರೆ,
  ಪಠ್ಯ ಪುಸ್ತಕಗಳನ್ನು ಸಂಪಾದಿಸಿದ್ದಾರೆ. ಸಂಶೋಧನ ಲೇಖನಗಳು ಪ್ರಕಟವಾಗಿವೆ. ಪ್ರಶಸ್ತಿ ಸ್ವೀಕರಿಸಿದ ಡಾ. ಶೈಲಜಾ ಅವರಿಗೆ ಕಾಲೇಜಿನ ಸಿಡಿಸಿ ಅಧ್ಯಕ್ಷರು, ಕ್ಷೇತ್ರದ ಶಾಸಕರಾದ ಸಂಗಮೇಶ್ವರ ಬಿ.ಕೆ ಅವರು , ಅಧ್ಯಾಪಕ ವರ್ಗ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಿಡಿಸಿ ಸದಸ್ಯರುಗಳು ಈ ಮೂಲಕ ಅಭಿನಂದನೆಗಳನ್ನು ತಿಳಿಸಿರುತ್ತಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I