Monday, August 3, 2026
Homeಸೂರ್ಯಗಗನI ಅ‌.26 ರಂದು ಸೊರಬದ ಬಂಗಾರಧಾಮದಲ್ಲಿ I ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ I

I ಅ‌.26 ರಂದು ಸೊರಬದ ಬಂಗಾರಧಾಮದಲ್ಲಿ I ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ I

I ಅ‌.26 ರಂದು ಸೊರಬದ ಬಂಗಾರಧಾಮದಲ್ಲಿ I ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ I

ಶಿವಮೊಗ್ಗ : ಎಸ್. ಬಂಗಾರಪ್ಪ ಫೌಂಡೇಷನ್, ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಅ. 26ರಂದು ಸೊರಬದ ಬಂಗಾರಧಾಮದಲ್ಲಿ ಬೆಳಗಿನಿಂದ ಸಂಜೆಯವರೆಗೆ ಆಯೋಜಿಸಲಾಗಿದೆ ಎಂದು ವಿಚಾರ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬಂಗಾರಪ್ಪನವರು ಸಮಾಜವಾದಿ ಚಿಂತಕರು, ಅಭಿವೃದ್ಧಿಯ ಹರಿಕಾರರಾಗಿದ್ದರು. ಬಡವರ ಬಂಧುವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನಮಾನಸದಲ್ಲಿ ಉಳಿದಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರೊಂದು ನಕ್ಷತ್ರವಾಗಿದ್ದಾರೆ. ಇಂತಹ ಬಂಗಾರಪ್ಪನವರ ಜನ್ಮ ದಿನೋತ್ಸವವನ್ನು ವಿಶೇಷವಾಗಿ ಆಯೋಜಿಸಲಾಗಿದೆ ಎಂದರು.

ಜನ್ಮ ದಿನೋತ್ಸವದ ಅಂಗವಾಗಿ 4 ಜನರಿಗೆ ‘ಬಂಗಾರ’ ಪ್ರಶಸ್ತಿ ನೀಡಲಾಗುವುದು. ಈ ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿರುತ್ತದೆ. *ಈ ಬಾರಿ ‘ಸಾಹಿತ್ಯ ಬಂಗಾರ’ದ ಪ್ರಶಸ್ತಿಯು ಪ್ರಸಿದ್ಧ ಸಾಹಿತಿ ಡಾ. ಕಾಳೇಗೌಡ ನಾಗವಾರ, ‘ಧರ್ಮ ಬಂಗಾರ ಪ್ರಶಸ್ತಿ’ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ಅವರಿಗೆ, ‘ಜಾನಪದ ಬಂಗಾರ’ ಪ್ರಶಸ್ತಿಯು ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ಅವರಿಗೆ ಹಾಗೂ ‘ಕಲಾ ಬಂಗಾರ’ ಪ್ರಶಸ್ತಿಯನ್ನು ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣ* ಅವರಿಗೆ ನೀಡಲಾಗುವುದು ಎಂದರು.

ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 5 ಗಂಟೆಗೆ ಬಂಗಾರಧಾಮದಲ್ಲಿ ನಡೆಯಲಿದೆ. ಸಚಿವ ಕೆ.ಹೆಚ್. ಮುನಿಯಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸಚಿವ ಸಂತೋಷ್ ಲಾಡ್, ಶಾಸಕ ಬೇಳೂರು ಗೋಪಾಲಕೃಷ್ಣ, ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ತಿಲಕ್ ಕುಮಾರ್, ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ. ನಾಗರಾಜ್ ಮೂರ್ತಿ. ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ ನಾಯಕ್ ಉಪಸ್ಥಿತರಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಚಿವ ಎಸ್. ಮಧು ಬಂಗಾರಪ್ಪ ವಹಿಸಲಿದ್ದಾರೆ ಎಂದರು.
ಮುಂದುವರೆದಂತೆ, ಬಂಗಾರಪ್ಪನವರ ಚಿಂತನೆಗಳು, ಆದರ್ಶಗಳು ಎಲ್ಲಾ ಕಾಲಕ್ಕೂ ವರ್ತಮಾನವಾಗಿಯೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಅ. 26ರ ಬೆಳಗ್ಗೆ 10.30ಕ್ಕೆ ಸೊರಬದ ಡಾ. ರಾಜ್ ಕುಮಾರ್ ರಂಗಮಂದಿರದಲ್ಲಿ ಬಂಗಾರಪ್ಪನವರ ಚಿಂತನೆಗಳು ಕುರಿತ ಸುಸ್ಥಿರ ಬದುಕು -ಪ್ರಸ್ತುತತೆಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಹೆಚ್.ಎಲ್. ಪುಷ್ಪಾ, ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉಪನ್ಯಾಸ ನೀಡುವರು. ವಿಚಾರ ಸಂಕಿರಣದ ಉದ್ಘಾಟನೆಯನ್ನು ಪ್ರಸಿದ್ಧ ಕವಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸಾಹಿತಿ ಡಾ. ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸುವರು ಎಂದರು.
ನಂತರ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಬಂಗಾರಪ್ಪನವರ ಅಭಿಮಾನಿಗಳು, ಹಿತೈಷಿಗಳು ಆಗಮಿಸಲಿದ್ದಾರೆ. ಸಾರ್ವಜನಿಕರು ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಚಾರ ವೇದಿಕೆಯ ಪ್ರಮುಖರಾದ ಶಮಂತ್, ಆದರ್ಶ ಹುಂಚದಕಟ್ಟೆ ಹಾಗೂ ಕಾಂಗ್ರೆಸ್ ಮುಖಂಡರು, ಉಸ್ತುವಾರಿ ಮಂತ್ರಿಗಳ ಆಪ್ತ ಸಹಾಯಕರಾದ ಜಿಡಿ.ಮಂಜುನಾಥ್ ಅವರುಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I