Sunday, August 2, 2026
Homeಸೂರ್ಯಗಗನI ಆವಿಷ್ಕಾರಿ ಚಿಂತನೆ ಯಶಸ್ವಿ‌ ಉದ್ಯಮದ ಗುಟ್ಟು I  ಬಿ.ಗೋಪಿನಾಥ I

I ಆವಿಷ್ಕಾರಿ ಚಿಂತನೆ ಯಶಸ್ವಿ‌ ಉದ್ಯಮದ ಗುಟ್ಟು I  ಬಿ.ಗೋಪಿನಾಥ I

I ಆವಿಷ್ಕಾರಿ ಚಿಂತನೆ ಯಶಸ್ವಿ‌ ಉದ್ಯಮದ ಗುಟ್ಟು I  ಬಿ.ಗೋಪಿನಾಥ I
ಶಿವಮೊಗ್ಗ: ಯಶಸ್ವಿ ಉದ್ಯಮಿಗೆ ಆವಿಷ್ಕಾರಿ ಚಿಂತನೆಗಳು, ಸಂಪನ್ಮೂಲಗಳ ಕ್ರೋಡೀಕರಣ ಮತ್ತು ನಿರ್ವಹಣಾ ಕೌಶಲ್ಯತೆಗಳು ಅತ್ಯವಶ್ಯಕ ವಿಚಾರವಾಗಿದೆ‌ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಗೋಪಿನಾಥ ಅಭಿಪ್ರಾಯಪಟ್ಟರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಂ.ಎಸ್.ಎಂ.ಇ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ ಇನ್‌ಕ್ಯುಬೇಷನ್ ಯೋಜನೆ ಕುರಿತು ಒಂದು ದಿನದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ನಮ್ಮ ಯುವ ಸಮೂಹದಲ್ಲಿರುವ ಸಾಕಷ್ಟು ನಾವಿನ್ಯ ಯೋಜನೆಗಳು ಸಮರ್ಪಕವಾಗಿ ಅನುಷ್ಟಾನಗೊಳ್ಳಲು ಸರ್ಕಾರ ಅನೇಕ ಉದ್ಯಮಶೀಲ ಯೋಜನೆಗಳನ್ನು ನೀಡುತ್ತಿದ್ದು, ಇಂತಹ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಉದ್ಯಮಶೀಲತೆಯ ಪ್ರೇರಣೆ‌ ನೀಡಲು ವಿದ್ಯಾಸಂಸ್ಥೆಗಳಲ್ಲಿ ಇನ್ಕ್ಯುಬೇಷನ್ ಸೆಂಟರ್ ಗಳು ಕಾರ್ಯನಿರ್ವಹಿಸುತ್ತಿದೆ. ಸಣ್ಣ ಪ್ರಯತ್ನಗಳು ಇಂದು ಅತಿ ದೊಡ್ಡ ಉದ್ಯಮವಾಗಿ‌ ಬೆಳೆದು‌ ನಿಂತಿರುವ ಅನೇಕ ಅದ್ಭುತ ಉದಾಹರಣೆಗಳಿವೆ.‌ ಅಂತಹ‌ ಯಶಸ್ಸಿನ ಹಾದಿಗಳಿಂದ ಪ್ರೇರಣೆ ಪಡೆಯಿರಿ. ಅವಕಾಶಗಳನ್ನು ಸಂಶೋಧಿಸಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಊರಿನಲ್ಲಿ ಇನ್ನೊಬ್ಬರ ಕೈಕೆಳಗೆ ಕೆಲಸ ಮಾಡಿದರೆ ಸಾಕು ಎಂಬ ಸಂಕುಚಿತತೆ ಬೇಡ.
ನಾವು‌ ರೂಪಿಸುವ ಯೋಜನೆಗಳಿಗೆ ನಾವೀನ್ಯತೆಯ ಸ್ಪರ್ಶ ನೀಡಿ. ಕಷ್ಟ ಸುಖಗಳನ್ನು ಸಮಾನವಾಗಿ ಎದುರಿಸುವ ಮನೋಸ್ಥೈರ್ಯ ಬೆಳೆಸಿಕೊಳ್ಳಿ‌. ಹೊಸತನವನ್ನು ಪ್ರಯತ್ನಿಸುವ, ವೈಫಲ್ಯಗಳನ್ನು ಎದುರಿಸುವ, ನಿರಂತರವಾಗಿ ಕಲಿಯುವ ಧೃತಿ ಯುವ ಸಮೂಹದಾಗಲಿ ಎಂದು ಹೇಳಿದರು.
ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಜೋಯಿಸ್ ರಾಮಾಚಾರ್ ಮಾತನಾಡಿ, ವಿದ್ಯಾರ್ಥಿ ಬದುಕಿನಲ್ಲಿಯೆ ನಾಯಕತ್ವದ ಗುಣ, ಉತ್ತಮ ಸಂವಹನ ಕೌಶಲ್ಯತೆಯನ್ನು ಬೆಳೆಸಿಕೊಳ್ಳಿ. ಎಲ್ಲರನ್ನೂ ಸಮಾನವಾಗಿ ಪರಿಗಣಿಸುವ ಮನಸ್ಥಿತಿ ಪಡೆಯಿರಿ. ಇದರಿಂದ ಉದ್ಯಮಿಯಾದಾಗ ಎಲ್ಲರನ್ನೂ ವಿಶ್ವಾಸದಿಂದ ನಿಭಾಯಿಸುವ ಕಲೆ‌ ನಿಮ್ಮದಾಗುತ್ತದೆ. ಮೊಬೈಲ್ ಎಂಬ ಅಂಧತ್ವದಲ್ಲಿ ಮುಳುಗಿ, ಅದೆಷ್ಟೋ ಯುವ ಮನಸ್ಸು ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಬೆಳಗ್ಗೆ ಬೇಗ ಏಳಲಾಗದ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿದ್ದಾರೆ.
ಬದುಕಿನ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುವಾಗ ಸಮಯದ ನಿರ್ವಹಣೆ ಎಂಬುದು ಅತಿ ಮುಖ್ಯ. ಕೈಗಾರಿಕೆಗಳಲ್ಲಿರುವ ಸಿಬ್ಬಂದಿಗೆ ಒಡೆತನದ ಅವಕಾಶ ಕೊಡಬೇಕು. ಇದರಿಂದ ಸಿಬ್ಬಂದಿಯಲ್ಲಿ ಹೆಚ್ಚು ಸಕ್ರಿಯವಾಗುವಂತಹ ತೊಡಗಿಸಿಕೊಳ್ಳುವ ಮನಸ್ಥಿತಿ ನಿರ್ಮಾಣವಾಗಲಿದೆ. ಪದವಿ ಮುಗಿಸಿ ಹೊರಬಂದಾಗ, ಇಷ್ಟ ಪಟ್ಟು ಕೆಲಸಕ್ಕೆ ಸೇರಿ, ಕಷ್ಟಪಟ್ಟು ದುಡಿಯಿರಿ. ಹೊಸತನವನ್ನು ಕಲಿಯಲು ಪ್ರಯತ್ನಿಸಿ. ಸಂಬಳದ ಬಗ್ಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಡಿ. ಅನುಭವ ಬೆಳೆದಂತೆಲ್ಲ ಖ್ಯಾತಿ ಮತ್ತು ಹಣ ತಾನಾಗಿಯೇ ದೊರಕಲಿದೆ ಎಂದು ಹೇಳಿದರು.ಕಾಲೇಜಿನ‌ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಎಂ.ಎಸ್.ಎಂ.ಇ ನಿವೃತ್ತ ಸಹ ನಿರ್ದೇಶಕ ಗೋಪಿನಾಥ ರಾವ್ ಅವರು ಉದ್ಯಮಶೀಲತೆಗೆ  ಸರ್ಕಾರದಿಂದ ಲಭ್ಯವಿರುವ ವಿವಿಧ ಆರ್ಥಿಕ ವೇದಿಕೆಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್, ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ., ಎಂಸಿಎ‌ ವಿಭಾಗದ ಮುಖ್ಯಸ್ಥ ಡಾ.ಹೇಮಂತ್ ಕುಮಾರ್, ಸಹಾಯಕ‌ ಪ್ರಾಧ್ಯಾಪಕ ಕೆ.ಎಲ್.ಅರುಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಾಗೇಶ್ ನಿರೂಪಿಸಿದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I