September 23, 2026

I ಸ್ವಾತಂತ್ರ್ಯ ಸಂಗ್ರಾಮಕಾರ ಭಗವಾನ್ ಬಿರ್ಸಾ ಮುಂಡಾ ಜಯಂತಿ I ರಾಜ್ಯ ಬಿಜೆಪಿ ಘಟಕದಿಂದ ಸಭೆ I

0
IMG-20251103-WA0053

I ಸ್ವಾತಂತ್ರ್ಯ ಸಂಗ್ರಾಮಕಾರ ಭಗವಾನ್ ಬಿರ್ಸಾ ಮುಂಡಾ ಜಯಂತಿ I ರಾಜ್ಯ ಬಿಜೆಪಿ ಘಟಕದಿಂದ ಸಭೆ I

ಬೆಂಗಳೂರು : ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಬುಡಕಟ್ಟು ಸಮುದಾಯಗಳ ಪರವಾಗಿ ಬ್ರಿಟೀಷರ ವಿರುದ್ಧ ಹೋರಾಡಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಳ್ಳಬೇಕಾದ ಕಾರ್ಯಾಚಟುವಟಿಕೆಗಳ ಕುರಿತು ಪೂರ್ವ ಭಾವಿ ಸಭೆ ನಡೆಸಲಾಯಿತು.

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಗೌರವಾರ್ಥ ನವೆಂಬರ್‌ 15 ನ್ನು ಜನಜಾತೀಯ ಗೌರವ ದಿವಸವಾಗಿ ಆಚರಿಸಲಾಗುತ್ತಿದ್ದು, ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂಬ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಬಿ ವೈ ವಿಜೇಯಂದ್ರ ರವರು,ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ  ಬಸವರಾಜ್ ಮುತ್ತಿಮಡು, ST ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ  ಬಸವರಾಜ್ ಹುಂದ್ರಿ, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!