September 24, 2026

I ಸರೋಜಾ.ಬಿ ಶಿಳ್ಳಿನ್ I ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ I

0
1002137918

I ಸರೋಜಾ.ಬಿ ಶಿಳ್ಳಿನ್ I ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ I

ಶಿವಮೊಗ್ಗ: ನಗರದ ಗೋಪಾಳಗೌಡ ಬಡಾವಣೆಯ ಅನುಪಿನ ಕಟ್ಟೆ ರಸ್ತೆಯಲ್ಲಿರುವ ಪೋದಾರ್ ಶಾಲೆಯ ಪ್ರಾಂಶುಪಾಲರಾದ ಸರೋಜಾ.ಬಿ ಶಿಳ್ಳಿನ್ ರವರು ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಟಲ್ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರಿಂದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ಪಡೆದಿದ್ದಾರೆ. ಕಿರಣ್ ಬೇಡಿ ಅವರನ್ನು ಬಾಲ್ಯದಿಂದಲೂ ಮಾದರಿಯನ್ನಾಗಿಟ್ಟುಕೊಂಡು ಬೆಳೆದ ನಮ್ಮ ಪ್ರಾಂಶುಪಾಲರು ಅವರ ಕೈಯಿಂದಲೇ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಷಯ. ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ವೃಂದದವರು ಪ್ರಾಂಶುಪಾಲರಿಗೆ ಶುಭಕೋರಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Spread the love

Leave a Reply

Your email address will not be published. Required fields are marked *

error: Content is protected !!