Sunday, August 2, 2026
Homeಸೂರ್ಯಗಗನ I ಕನಕದಾಸರು I ಸಮಾಜದ ಅಂಕು-ಡೊಂಕುಗಳನ್ನು I ತಿದ್ದಿದ ಮಹಾನ್ ದಾರ್ಶನಿಕರು I ಭಕ್ತ ಮಂಡಳಿ...

 I ಕನಕದಾಸರು I ಸಮಾಜದ ಅಂಕು-ಡೊಂಕುಗಳನ್ನು I ತಿದ್ದಿದ ಮಹಾನ್ ದಾರ್ಶನಿಕರು I ಭಕ್ತ ಮಂಡಳಿ ಅಧ್ಯಕ್ಷ ತಿಪ್ಪಣ್ಣ I

 I ಕನಕದಾಸರು I ಸಮಾಜದ ಅಂಕು-ಡೊಂಕುಗಳನ್ನು I ತಿದ್ದಿದ ಮಹಾನ್ ದಾರ್ಶನಿಕರು I ಭಕ್ತ ಮಂಡಳಿ ಅಧ್ಯಕ್ಷ ತಿಪ್ಪಣ್ಣ I

ಸೊರಬ: ದಾಸಶ್ರೇಷ್ಠ ಕನಕದಾಸರು ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ಕನಕದಾಸ ಭಕ್ತ ಮಂಡಳಿ ಅಧ್ಯಕ್ಷ ತಿಪ್ಪಣ್ಣ ಹೇಳಿದರು. ಪಟ್ಟಣದ ದಂಡಾವತಿ ಬ್ಲಾಕ್‌ನಲ್ಲಿ ನಡೆದ ಕನಕದಾಸ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನತೆ ದೃಷ್ಟಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು. ಅವರ ಭಕ್ತಿ ಜ್ಞಾನದಿಂದ ಜಾತಿ ವ್ಯವಸ್ಥೆ ವಿರುದ್ಧವಾಗಿ ಧ್ವನಿಎತ್ತಿ ದಾಸ ಶ್ರೇಷ್ಠರಾಗಿದ್ದಾರೆ. ಅವರು ಮೂಲ ಹೆಸರು ತಿಮ್ಮಪ್ಪ ನಾಯ್ಕ, ಅವರು ಭಕ್ತಿ ಮಾರ್ಗವನ್ನು ಆಯ್ಕೆ ಮಾಡಿಕೊಂಡು ಕನಕದಾಸ ಎಂಬ ಹೆಸರನ್ನು ಪಡೆದರು. ಅವರು ಜನರ ನಡುವೆ ಸಮಾನತೆ, ವಿನಯ, ಸತ್ಯ, ಅಹಿಂಸೆ ಎಂಬ ಮೌಲ್ಯಗಳನ್ನು ಸಾರಿದರು ಎಂದರು.

ಶಿಕ್ಷಕ ವಿನಯ ಕುಮಾರ್ ಹೊನ್ನಾಳಿ ಮಾತನಾಡಿ, ಕನಕದಾಸರು ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆಗಳನ್ನು ನೀಡಿದ್ದಾರೆ. ಅವರ ದೃಢವಾದ ಭಕ್ತಿಗೆ ಉಡುಪಿಯ ಶ್ರೀ ಕೃಷ್ಣನೇ ತನ್ನ ಸ್ಥಾನವನ್ನು ಬದಲಿಸಿದ ಎಂದು ಹೇಳಲಾಗುತ್ತದೆ. ಜೊತೆಗೆ ಅದನ್ನು ಕನಕನ ಕಿಂಡಿ ಎಂದು ಕರೆಯಲಾಗುತ್ತದೆ. ಅವರು ತಮ್ಮ ಜೀವಿತಾವಧಿಯಲ್ಲಿ ಅನೇಕ ದೇಗುಲಗಳನ್ನು ಸಂದರ್ಶಿಸಿದ್ದಾರೆ. ಅವರು ಪಾದಸ್ಪರ್ಶ ಮಾಡಿದ ದೇಗುಲಗಳು ಪವಾಡಕ್ಕೆ ಸಾಕ್ಷಿಯಾಗಿವೆ ಎಂದರು.ಈ ಸಂದರ್ಭದಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಉಪಾಧ್ಯಕ್ಷ ದತ್ತಾ ಸೊರಬ, ಬಾಲಕೃಷ್ಣ ಸಿದ್ದಾಪುರ, ಯಶವಂತ ಸಿದ್ದಾಪುರ, ಈಶ್ವರ ಸಮನವಳ್ಳಿ, ವೈಷ್ಣವಿ, ಅಲಿನಾ, ಸೇರಿದಂತೆ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I