Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಪಾವತಿಯ ಬಗ್ಗೆ ಪೊಲೀಸ್ ಠಾಣೆಗೆ I ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು I

I ಪಾವತಿಯ ಬಗ್ಗೆ ಪೊಲೀಸ್ ಠಾಣೆಗೆ I ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು I ಶಿವಮೊಗ್ಗ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿರುವ ಶ್ರೀ ಸಂತೋಷ್ ಎಂ ಎಸ್ ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್…

I ಪಾವತಿಯ ಬಗ್ಗೆ ಪೊಲೀಸ್ ಠಾಣೆಗೆ I ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು I

ಶಿವಮೊಗ್ಗ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿರುವ ಶ್ರೀ ಸಂತೋಷ್ ಎಂ ಎಸ್ ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲಾನ್ ಮೂಲಕ ವಿಧಿಸಲಾದ ದಂಡದ ಪಾವತಿಯಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು. ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ದಿನಾಂಕ ದಿನಾಂಕ 12.12.2025 ರವರೆಗೆ ಈ ಚಲನ್ ಮೂಲಕ ಪಾವತಿಗಾಗಿ ಬಾಕಿ ಇರುವ ದಂಡದ ಮೊತ್ತದಲ್ಲಿ 50% ಕಡಿತಗೊಳಿಸಿ ಕಡಿಮೆ ಮೊತ್ತದ ದಂಡ ಪಾವತಿ ಮಾಡಿದಲ್ಲಿ ಅಂತಹ ಪ್ರಕರಣವನ್ನು ವಿಲೇ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಈ ಸವಲತ್ತನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಬಗ್ಗೆ ಪರಿಶೀಲಿಸಲಾಯಿತು.

ಬೆಟ್ಟಿ ಸಮಯದಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ನೀಡಿದ ವಿವರದಂತೆ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,00,508 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ರೂ. 16,33,91,250/- ಆಗಿದ್ದು ಅವುಗಳ ಪೈಕಿ ಒಟ್ಟು 1,527 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದ್ದು ಒಟ್ಟು ರೂ. 6,14,750/- ರಷ್ಟು ಹಣ ಪಾವತಿ ಮಾಡಲಾಗಿದೆ.

ದಿನಾಂಕ 13.12.2025 ರಂದು ಅಂದರೆ ಇದೇ ತಿಂಗಳ ಎರಡನೇ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಈ ಚಲನ್ ಮೂಲಕ ವಿಧಿಸಲಾದ ದಂಡದ ಮೊತ್ತದಲ್ಲಿ 50% ಕಡಿಮೆ ಮಾಡಿ ದಂಡದ ಮೊತ್ತವನ್ನು ಪಾವತಿ ಮಾಡುವಂತೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿರುವ ಯೋಜನೆಯು ಇನ್ನು ಕೇವಲ 10 ದಿನ ಜಾರಿಯಲ್ಲಿ ಇರುವ ಕಾರಣ ಅತಿ ಹೆಚ್ಚು ಪ್ರಕರಣಗಳಲ್ಲಿ ಕಡಿಮೆ ಮೊತ್ತದ ದಂಡ ಪಾವತಿ ಮಾಡಿ ಸಾರ್ವಜನಿಕರು ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗದಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ ಸದಸ್ಯ ಕಾರ್ಯದರ್ಶಿಗಳು ಕೋರಿಕೊಂಡಿದ್ದಾರೆ.

ಸಾರ್ವಜನಿಕರು ದಂಡದ ಮೊತ್ತದಲ್ಲಿ 50% ಕಡಿಮೆ ಮೊತ್ತದ ಹಣವನ್ನು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಹಾಗೂ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಭದ್ರಾವತಿ ನಗರದ ಸಂಚಾರಿ ಪೊಲೀಸ್ ಠಾಣೆ ಅಲ್ಲದೆ ರಸ್ತೆಯ ವೃತ್ತದಲ್ಲಿ ಇರುವಂತಹ ಸಂಚಾರಿ ಪೊಲೀಸ್ ಅಧಿಕಾರಿ ಆಗಿರುವಂತಹ ಸಹಾಯಕ ಪೊಲೀಸ್ ನಿರೀಕ್ಷಕರ ಬಳಿ ಇರುವ ಈ ವಿ ಎಂ ಯಂತ್ರಗಳ ಮೂಲಕ ಸಾರ್ವಜನಿಕರು ದಂಡದ ಮೊತ್ತವನ್ನು ಪಾವತಿ ಮಾಡಲು ಅನುಕೂಲ ಮಾಡಲಾಗಿದ್ದು ಈ ಅವಕಾಶದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದ್ದಾರೆ.

Gara Srinivas

Gara Srinivas

Leave a comment

error: Content is protected !!