Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ತುಮಕೂರು ವಿ.ವಿ.ಗೆ ಡಾ.ಶಿವಕುಮಾರ ಸ್ವಾಮೀಜಿ I ಹೆಸರಿಡಲು ಮನವಿ I

I ತುಮಕೂರು ವಿ.ವಿ.ಗೆ ಡಾ.ಶಿವಕುಮಾರ ಸ್ವಾಮೀಜಿ I ಹೆಸರಿಡಲು ಮನವಿ I ಬೆಂಗಳೂರು,  : ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್…
I ತುಮಕೂರು ವಿ.ವಿ.ಗೆ ಡಾ.ಶಿವಕುಮಾರ ಸ್ವಾಮೀಜಿ I ಹೆಸರಿಡಲು ಮನವಿ I
ಬೆಂಗಳೂರು,  : ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ.
ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರಿಗೆ ಲಿಖಿತ ಮನವಿ ಪತ್ರವನ್ನು ಕುಲಪತಿಗಳ ಮೂಲಕ‌ ಸಲ್ಲಿಸಿರುವ ಅವರು, ಕರ್ನಾಟಕ ರಾಜ್ಯದ ವಿಶ್ವವಿದ್ಯಾನಿಲಯಗಳಿಗೆ ಮಹಾತ್ಮರುಗಳ ಹೆಸರಿಡುವ ಪದ್ಧತಿ ರೂಡಿಯಲ್ಲಿದ್ದು, ಅದರಂತೆ ಸರ್ಕಾರವು ಆಗಾಗ ಸುತ್ತೋಲೆ, ಅಧಿಸೂಚನೆಗಳನ್ನು ಹೊರಡಿಸುತ್ತ ಬಂದಿರುತ್ತದೆ. ಇತ್ತೀಚೆಗೆ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವ ಸಂದರ್ಭದಲ್ಲಿ ಸದನದಲ್ಲಿ ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶಗೌಡ ರವರು ಡಾ.ಶಿವಕುಮಾರಸ್ವಾಮಿಗಳ ಹೆಸರನ್ನು ಇಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ತುಮಕೂರು ಜಿಲ್ಲೆಯು ಪ್ರಮುಖ ಶೈಕ್ಷಣಿಕ ಹಾಗೂ ಧಾರ್ಮಿಕ ಕೇಂದ್ರವಾಗಿದಕ್ಕೆ ಕಾರಣವಾದ ಸಂಸ್ಥೆಗಳ ಸಿಂಹಪಾಲು ಡಾ. ಶಿವಕುಮಾರ ಸ್ವಾಮಿಗಳ ನೇತೃತ್ವ ಹಾಗೂ ಸಿದ್ದಗಂಗಾ ಮಠದ್ದಾಗಿದೆ. ತ್ರಿವಿಧ ದಾಸೋಹಿ ಸಮೈಕ್ಯ ಭಾವವನ್ನು ಹೊಂದಿ ಜಾತಿ, ಕುಲ,ಧರ್ಮ ಎಲ್ಲವನ್ನೂ ಮೀರಿ ಶಿಕ್ಷಣ ರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದಾರೆ.  ಶತಾಯುಷಿಗಳಾಗಿದ್ದ ಡಾ. ಶಿವಕುಮಾರಸ್ವಾಮಿಗಳ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ಇಡುವುದು ಅತ್ಯಂತ ಸೂಕ್ತ ಎಂದು ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.
Gara Srinivas

Gara Srinivas

Leave a comment

error: Content is protected !!