September 25, 2026

I ನಗರದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ I ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ I

0
IMG-20251206-WA0088

I ನಗರದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ I ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ I

ಶಿವಮೊಗ್ಗ: ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಸರ್ವೋದಯ ವ್ಯಸನ ಮುಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಶ್ರದ್ಧಾ ಪೂರ್ವಕವಾಗಿ ಆಚರಿಸಲಾಯಿತು.

ಸರ್ವೋದಯ ವ್ಯಸನ ಮುಕ್ತ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಚಾಲಕರಾದ ನವೀನ್ ತಲಾರಿ ಅಧ್ಯಕ್ಷತೆ ವಹಿಸಿದರು. ಕೇಂದ್ರದ ಮುಖ್ಯಸ್ಥ ಪ್ರಶಾಂತ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆರಂಭಗೊಂಡು ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನವೀನ್ ತಲಾರಿಯವರು, “ಅಂಬೇಡ್ಕರ್ ಅವರು ಕಡಿದ ಹಾದಿ, ಅವರು ಕಟ್ಟಿಕೊಟ್ಟ ಸಂವಿಧಾನ ಹಾಗೂ ಸಮಾನತೆಯ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿ ದೀಪವಾಗಿವೆ,” ಎಂದು ತಿಳಿಸಿದರು. ಅವರು ಅಂಬೇಡ್ಕರ್ ಬೋಧನೆಗಳ ಅಗತ್ಯತೆಯನ್ನು ಯುವ ಪೀಳಿಗೆಗೆ ತಿಳಿಸುವುದು ಕಾಲದ ಅವಶ್ಯಕತೆ ಎಂದೂ ಹೇಳಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಶಾಂತ್ ಅವರು, “ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರ ತ್ಯಾಗ, ಜ್ಞಾನಪಿಪಾಸೆ ಮತ್ತು ಸಮಾಜ ಪರಿವರ್ತನೆಯ ದೃಷ್ಟಿಕೋನ ಪ್ರತಿಯೊಬ್ಬರಿಗೂ ಪ್ರೇರಣಾದಾಯಕ,” ಎಂದರು.

ಈ ಸಂದರ್ಭದಲ್ಲಿ ಸರ್ವೋದಯ ವ್ಯಸನ ಮುಕ್ತ ಕೇಂದ್ರದ ಸಿಬ್ಬಂದಿ, ಮಾನವ ಬಂಧುತ್ವ ವೇದಿಕೆಯ ಪದಾಧಿಕಾರಿಗಳು ಹಾಗೂ ಕೇಂದ್ರದ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್ ಚಿಂತನೆಗಳ ಕುರಿತು ಸಂವಾದ ನಡೆಸಿದರು.

ಕಾರ್ಯಕ್ರಮ ಕೊನೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಸಾಮಾಜಿಕ ಬಾಂಧವ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಸಂಕಲ್ಪ ಕೈಗೊಳ್ಳಲಾಯಿತು.

Spread the love

Leave a Reply

Your email address will not be published. Required fields are marked *

error: Content is protected !!