Saturday, August 1, 2026
Homeಸೂರ್ಯಗಗನI ಲೋಹಿಯಾ ಪ್ರಶಸ್ತಿಗೆ I ಶಿವಾನಂದ ತಗಡೂರು ಆಯ್ಕೆ I

I ಲೋಹಿಯಾ ಪ್ರಶಸ್ತಿಗೆ I ಶಿವಾನಂದ ತಗಡೂರು ಆಯ್ಕೆ I

I ಲೋಹಿಯಾ ಪ್ರಶಸ್ತಿಗೆ I ಶಿವಾನಂದ ತಗಡೂರು ಆಯ್ಕೆ I
ಬೆಂಗಳೂರು :  ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಬೆಂಗಳೂರು. ಇವರು ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025ನೇ ಸಾಲು) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. ರೈತ&ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ದಿನಾಂಕ 19-12-2025 ರ ಶುಕ್ರವಾರ ಬೆಳಗ್ಗೆ 11.15ಗಂಟೆಗೆ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥರಾದ ಎಚ್.ಎನ್.ಆರತಿ, ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಆರ್.ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಸಿಸಿರಾ ಅವರು ತಿಳಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I