Monday, August 3, 2026
Homeಸೂರ್ಯಗಗನI ಗ್ರಾಮೀಣ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಯೋಜನೆ I ಜಾರಿಗೆ ಕೆಯುಡಬ್ಲೂಜೆ ಒತ್ತಾಯ...

I ಗ್ರಾಮೀಣ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಯೋಜನೆ I ಜಾರಿಗೆ ಕೆಯುಡಬ್ಲೂಜೆ ಒತ್ತಾಯ I ಕ್ರಮದ ಭರವಸೆ ನೀಡಿದ ಸಿಎಂ I

I ಗ್ರಾಮೀಣ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಯೋಜನೆ I ಜಾರಿಗೆ ಕೆಯುಡಬ್ಲೂಜೆ ಒತ್ತಾಯ I ಕ್ರಮದ ಭರವಸೆ ನೀಡಿದ ಸಿಎಂ I

ಬೆಂಗಳೂರು : ಪತ್ರಕರ್ತರಿಗಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ನೀಡಬೇಕು ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಈ ಯೋಜನೆಗಳನ್ನು ಜಾರಿಗೆ ನೀಡಿದ್ದರೂ, ಇನ್ನೂ ಒಬ್ಬ ಪತ್ರಕರ್ತರಿಗೂ ಈ ಯೋಜನೆ ಪ್ರಯೋಜನ ಸಿಗಲಿಲ್ಲ. ಇದಕ್ಕೆ ಕಠಿಣ ಷರತ್ತುಗಳು ಕಾರಣವಾಗಿವೆ ಎನ್ನುವುದನ್ನು ವಿವರಿಸಿದ್ದಾರೆ.

ಇದಕ್ಕೆ ತಕ್ಷಣವೇ ಸ್ಪಂಧಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಮಾತ್ರವೇ ಸೀಮಿತ ಮಾಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮಾನ್ಯತೆ ಪಡೆದಿರುವ ಪತ್ರಿಕೆಯಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮೊದಲ ಹಂತದಲ್ಲಿ 5,500 ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ನೀಡಬೇಕಾಗಿತ್ತು. ಆದರೆ ಈ ಯೋಜನೆಯೂ ಸರಿಯಾಗಿ ಜಾರಿಯಾಗದ ಕಾರಣ ಗ್ರಾಮೀಣ ಪತ್ರಕರ್ತರನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ಮನವಿಯಲ್ಲಿ ವಿವರಿಸಲಾಗಿದೆ.
ಕಠಿಣ ಷರತ್ತುಗಳನ್ನು ಸಡಿಲಿಸುವಂತೆ ಹಲವು ಬಾರಿ ಪತ್ರ ಬರೆದು ಸರ್ಕಾರಕ್ಕೆ ವಿನಂತಿಸಲಾಗಿದೆ.  ಆದರೂ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ ಎನ್ನುವ ಅಂಶವನ್ನು ಮನವಿಯಲ್ಲಿ ತಿಳಿಸಲಾಗಿದೆ.
ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆಯಲು ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಪೂರ್ಣಾವಧಿ ನೇಮಕಾತಿ ಇರುವುದಿಲ್ಲ. ಆದುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪತ್ರಿಕಾ ಸಂಸ್ಥೆಗಳು/ಸಂಪಾದಕರು ನೀಡುವ ದೃಢೀಕರಣ ಆಧರಿಸಿ ಮತ್ತು ಬೈಲೈನ್‌ನ್ನು ಮಾನದಂಡವಾಗಿಸಿಕೊಂಡು ಬಸ್‌ಪಾಸ್ ನೀಡಬೇಕೆಂದು ಮನವಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ, ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಮನವಿಯನ್ನು ನೀಡಲಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I