Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
Uncategorized

I ಡಿಸಿಸಿ ಬ್ಯಾಂಕಿನ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ I ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ I

I ಡಿಸಿಸಿ ಬ್ಯಾಂಕಿನ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ I ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ I ಶಿವಮೊಗ್ಗ :- ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಂದಿನ ಸಾಲಿಗೆ 45 ಕೋಟಿ ರೂ. ಲಾಭಗಳಿಸುವ ಉದ್ದೇಶ ಹೊಂದಿದ್ದು, ಬ್ಯಾಂಕನ್ನು ಮತ್ತಷ್ಟು ಆಧುನಿಕಗೊಳಿಸಲಾಗುವುದು ಎಂದು ಅಧ್ಯಕ್ಷ…

I ಡಿಸಿಸಿ ಬ್ಯಾಂಕಿನ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ I ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ I

ಶಿವಮೊಗ್ಗ :- ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಂದಿನ ಸಾಲಿಗೆ 45 ಕೋಟಿ ರೂ. ಲಾಭಗಳಿಸುವ ಉದ್ದೇಶ ಹೊಂದಿದ್ದು, ಬ್ಯಾಂಕನ್ನು ಮತ್ತಷ್ಟು ಆಧುನಿಕಗೊಳಿಸಲಾಗುವುದು ಎಂದು ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.

ಅವರು ಇಂದು ಬ್ಯಾಂಕಿನ ಸಭಾಂಗಣದಲ್ಲಿ ಹೊಸವರ್ಷ-2026ರ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಡಿಸಿಸಿ ಬ್ಯಾಂಕನ್ನು ಮತ್ತಷ್ಟು ಸದೃಢ ಮತ್ತು ಆಧುನಿಕಗೊಳಿಸಲಾಗುವುದು. ಈ ಹಿನ್ನಲೆಯಲ್ಲಿ ಸುಮಾರು 50 ಹೊಸ ಶಾಖೆಗಳನ್ನು ತೆರೆಯಲಾಗುತ್ತದೆ. ಜಿಲ್ಲೆಯ ಎಲ್ಲಾ ಹಿಂದುಳಿದ ಭಾಗಗಳಲ್ಲೂ ಶಾಖೆಗಳನ್ನು ತೆರೆಯುವ ಮೂಲಕ ಗ್ರಾಹಕರನ್ನು ಡಿಸಿಸಿ ಬ್ಯಾಂಕ್ ತೆಕ್ಕೆಗೆ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ 8 ಶಾಖೆಗಳನ್ನು ತೆರೆಯಲಾಗಿದೆ. ಬ್ಯಾಂಕಿನ ವಜ್ರ ಮಹೋತ್ಸವದ ನೆನಪಿಗೆ ಮುಂದಿನ ಸಾಲಿನಲ್ಲಿ ಆಯನೂರು, ಕಾಚಿನಕಟ್ಟೆ, ತುಮುರಿ ಬ್ಯಾಕೋಡು, ಕುಪ್ಪಗಡ್ಡೆ, ಚಂದ್ರಗುತ್ತಿ, ಹಿತ್ಲ, ನಿಟ್ಟೂರು ಸೇರಿದಂತೆ 14 ಶಾಖೆಗಳನ್ನು ತೆರೆಯಲಾಗುವುದು. 2028ರ ವೇಳೆಗೆ 50 ಶಾಖೆಗಳನ್ನು ಪೂರ್ಣಗೊಳಿಸಲಾಗುವುದು ಮತ್ತು ವಜ್ರ ಮಹೋತ್ಸವದ ಹಿನ್ನಲೆಯಲ್ಲಿ ಸುಮಾರು ಆರು ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡವನ್ನು ಸ್ಥಾಪಿಸಲು ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ಸಂಕ್ರಾಂತಿ ನಂತರ ಭೂಮಿಪೂಜೆ ಮಾಡಲಾಗುವುದು ಎಂದರು.

ಬ್ಯಾಂಕ್ 2025ನೇ ಸಾಲಿನಲ್ಲಿ 36.57 ಕೋಟಿ ಲಾಭಗಳಿಸಿತ್ತು. 2026ನೇ ಸಾಲಿನಲ್ಲಿ ಸುಮಾರು 45 ಕೋಟಿ ಲಾಭ ಹೊಂದುವ ನಿರೀಕ್ಷೆಯಿದೆ. ಹಾಗೆಯೇ 1.26 ಲಕ್ಷ ರೈತರಿಗೆ 1300 ಕೋಟಿ ರೂ. ಬೆಳೆ ಸಾಲ ನೀಡಲಾಗುವುದು. ಸುಮಾರು 2100 ಸ್ವ-ಸಹಾಯ ಸಂಘಗಳಿಗೆ 100 ಕೋಟಿ ರೂ. ಸಾಲ ವಿತರಿಸುವ ಯೋಜನೆ ಹೊಂದಲಾಗಿದೆ. 1900 ಕೋಟಿ ಠೇವಣಿ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಬ್ಯಾಂಕ್‌ನಲ್ಲಿ 1720.88 ಕೋಟಿ ಠೇವಣಿ ಸಂಗ್ರಹವಾಗಿರುತ್ತದೆ ಎಂದು ತಿಳಿಸಿದರು.

Gara Srinivas

Gara Srinivas

Leave a comment

error: Content is protected !!