Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಮೌಲ್ಯಯುತ ಚಿಂತನೆ‌ ಗಟ್ಟಿಗೊಳಿಸಿಕೊಳ್ಳಿ I ಜಿ.ಎಸ್.ನಾರಾಯಣ ರಾವ್‌ I

I ಮೌಲ್ಯಯುತ ಚಿಂತನೆ‌ ಗಟ್ಟಿಗೊಳಿಸಿಕೊಳ್ಳಿ I ಜಿ.ಎಸ್.ನಾರಾಯಣ ರಾವ್‌ I ಶಿವಮೊಗ್ಗ: ಯುವ ಸಮೂಹ ಶಿಕ್ಷಣದ ಜೊತೆಗೆ ಮೌಲ್ಯಯುತ ಚಿಂತನೆಗಳನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿಯ ಸಭಾಂಗಣದಲ್ಲಿ…
I ಮೌಲ್ಯಯುತ ಚಿಂತನೆ‌ ಗಟ್ಟಿಗೊಳಿಸಿಕೊಳ್ಳಿ I ಜಿ.ಎಸ್.ನಾರಾಯಣ ರಾವ್‌ I
ಶಿವಮೊಗ್ಗ: ಯುವ ಸಮೂಹ ಶಿಕ್ಷಣದ ಜೊತೆಗೆ ಮೌಲ್ಯಯುತ ಚಿಂತನೆಗಳನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿಯ ಸಭಾಂಗಣದಲ್ಲಿ ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟೆಂಟ್‌ ಟ್ರಸ್ಟ್‌ ವತಿಯಿಂದ ಬುಧವಾರ ಸಂಜೆ ಏರ್ಪಡಿಸಿದ್ದ ವಿವಿಧ ವಿದ್ಯಾಸಂಸ್ಥೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬದುಕಿನ ಉನ್ನತಿಗೆ ಲಭ್ಯವಾಗುವ ಎಲ್ಲಾ ಉನ್ನತ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಿ. ಇದರ ಜೊತೆಯಲ್ಲಿ ಸಮಾಜದ ಸಹಕಾರವನ್ನು ಸದಾ ನೆನಪಿನಲ್ಲಿಡಿ. ಸಮಾಜದ ಋಣವನ್ನು ತೀರಿಸುವ ಮನೋಭಾವ ಯುವ ಸಮೂಹ ಬೆಳೆಸಿಕೊಳ್ಳಬೇಕು ಎಂದು ಹೇಳಿದರು
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಶಿಕ್ಷಣ ಸಿಗಬೇಕು ಎಂಬ ಮೂಲ ಉದ್ದೇಶದೊಂದಿಗೆ ಎನ್ಇಎಸ್ ಸಂಸ್ಥೆ ಸ್ಥಾಪಿಸಲಾಗಿದೆ. ಕಲಿಕೆಯ ಸಂದರ್ಭದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದೆಂಬ ಕಾಳಜಿಯಿಂದ ಎನ್ಇಎಸ್ ಎಜುಕೇಷನ್‌ ಅಸಿಸ್ಟೆಂಟ್ ಟ್ರಸ್ಟ್‌ ಕಾರ್ಯನಿರ್ವಹಿಸುತ್ತಿದೆ.
ಸಂಸ್ಥೆಗೆ ದಾಖಲಾತಿಯ ವೇಳೆಯಲ್ಲಿ ಪೋಷಕರಿಗಿರುವ ಆರ್ಥಿಕ ಅನಾನುಕೂಲತೆಗಳನ್ನು ಅರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ ಅಗತ್ಯ ಸಹಾಯಧನ ನೀಡಲಾಗುತ್ತಿದೆ. ಈ ಮೂಲಕ ಉತ್ತಮ ಅಧ್ಯಯನ, ಫಲಿತಾಂಶ ಮತ್ತು ಸಾಧನೆಗೆ ಪೂರಕ ವೇದಿಕೆಯಾಗಿ ನಿಂತಿದೆ. ಇದರ ಲಾಭಾಂಶ ಪಡೆದ ವಿದ್ಯಾರ್ಥಿಗಳು, ಉನ್ನತ ಸ್ಥಾನ ತಲುಪಿದ ನಂತರ ಭವಿಷ್ಯದಲ್ಲಿ ತಮ್ಮಂತಹ ಇತರೆ ವಿದ್ಯಾರ್ಥಿಗಳಿಗೂ ಸಹಾಯ ಮಾಡುವಂತಹ ಸಮಾಜಮುಖಿ ಕಾಳಜಿ ಬೆಳೆಸಿಕೊಳ್ಳಿ ಎಂದು ಹೇಳಿದರು.
ಎನ್‌ಇಎಸ್‌ ಎಜುಕೇಷನ್‌ ಅಸಿಸ್ಟೆಂಟ್ ಟ್ರಸ್ಟ್‌ ಮ್ಯಾನೇಜಿಂಗ್‌ ಟ್ರಸ್ಟಿ ಟಿ.ಆರ್.‌ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಸಂಸ್ಥೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲಕರವಾಗುವಂತೆ, ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ 462 ವಿದ್ಯಾರ್ಥಿಗಳಿಗೆ ಸುಮಾರು 26 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಆಶಯ ನಮ್ಮದಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್‌, ನಿರ್ದೇಶಕರಾದ ಹೆಚ್.ಸಿ.ಶಿವಕುಮಾರ್‌,‌ ಮಧುರಾವ್, ಡಿ.ಎಸ್.ಅರುಣ್, ಅನಂತದತ್ತ, ಎಂ.ಆರ್.ಸೀತಾಲಕ್ಷ್ಮೀ, ಜಿ.ಎನ್.ಸುಧೀರ್, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ,‌ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಕಿಶನ್.ಎನ್, ಸಂಜಯ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Gara Srinivas

Gara Srinivas

Leave a comment

error: Content is protected !!