I ಸರ್ಕಾರಿ ಕಚೇರಿಗಳ ಕೊಠಡಿಗಳಿಗೆ ಕ್ಯಾಮರಾ ಅಳವಡಿಸಿ I ಜಿಲ್ಲಾ ಜನತಾದಳದಿಂದ ಜಿಲ್ಲಾಡಳಿತಕ್ಕೆ ಮನವಿ I
ಶಿವಮೊಗ್ಗ: ಸರ್ಕಾರಿ ಕಚೇರಿಯ ಅಧಿಕೃತ ಕೊಠಡಿಯಲ್ಲಿ ಪೋಲಿಸ್ ಮಹಾನಿರ್ದೇಶಕರಾದ ರಾಮಚಂದ್ರ ರಾವ್ ರವರು ಮಹಿಳೆಯರೊಂದಿಗೆ ನಡೆದುಕೊಂಡಿರುವ ರೀತಿಯನ್ನು ಗಮನಿಸಿ ಕೂಡಲೆ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಹಿರಿಯ ಅಧಿಕಾರಿಗಳ ಕೊಠಡಿಯಲ್ಲಿ ಕಡ್ಡಾಯವಾಗಿ ಕ್ಯಾಮರಾಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಜನತಾದಳದಿಂದ ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ಮಹಾ ನಿರ್ದೇಶಕರಾದ ರಾಮಚಂದ್ರರಾವ್ ರವರು ಸರ್ಕಾರಿ ಕಛೇರಿಯ ಅಧಿಕೃತ ಕೊಠಡಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ಫೋಟೋ ವೀಡಿಯೋಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವುದು ನಿಮ್ಮ ಗಮನಕ್ಕೂ ಬಂದಿರುತ್ತದೆ. ಇದೇ ರೀತಿ ಹೆಚ್ಚಿನ ಕಚೇರಿಗಳಲ್ಲಿ ಅಧಿಕಾರಿಗಳು ತಮ್ಮ ಕೈಕೆಳಗಿನ ಮಹಿಳಾ ಅಧಿಕಾರಿಗಳೊಂದಿಗೆ ಮತ್ತು ಸಿಬ್ಬಂದಿಗಳೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ಕೆಲಸ ಅಥವಾ ಮಾನ ಕಳೆದುಕೊಳ್ಳುವ ಭೀತಿಯಿಂದ ಇಂತಹ ಕೃತ್ಯಗಳ ಬಗ್ಗೆ ಹೆಣ್ಣು ಮಕ್ಕಳು ಕೆಲವೊಮ್ಮೆ ದೂರು ನೀಡುವುದಿಲ್ಲ. ಆದ್ದರಿಂದ ಕೂಡಲೇ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಆಳವಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಸತೀಶ್, ಪ್ರಮುಖರಾದ ಎಸ್.ವಿ.ರಾಜಮ್ಮ, ಭವಾನಿ ನರಸಿಂಹ, ಉಷಾ ನಾಯಕ್, ಜಯಲಕ್ಷ್ಮಿ ಇದ್ದರು.

