I ತ್ಯಾಜವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ I ಸತೀಶ್ ಹೆಚ್.ಎಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆI
I ತ್ಯಾಜವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ I ಸತೀಶ್ ಹೆಚ್.ಎಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆI
ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ತ್ಯಾಜವಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಾತ್ವಿಕ ನುಡಿ ಪತ್ರಿಕೆಯ ಸಂಪಾದಕ ಹಾಗೂ ಎರೇಕೊಪ್ಪ ಗ್ರಾಮದ ಸತೀಶ್ ಹೆಚ್.ಎಂ (ಮುಂಚೆಮನೆ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನ ಭರ್ತಿಗಾಗಿ ಚುನಾವಣೆಯನ್ನು ಆಯೋಜಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಹೆಚ್.ಎಂ (ಮುಂಚೆಮನೆ) ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇತರರು ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ, ಸತೀಶ್ ರವರನ್ನು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.
ತ್ಯಾಜವಳ್ಳಿ ಸಹಕಾರ ಸಂಘಕ್ಕೆ ಹೊಸ ನಾಯಕತ್ವ – ರೈತಪರ ಕಾರ್ಯಗಳಿಗೆ ಸತೀಶ್ ಹೆಚ್.ಎಂ ಸಂಕಲ್ಪ
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಸತೀಶ್ ಹೆಚ್.ಎಂ (ಮುಂಚೆಮನೆ) ಅವರು, ರೈತಪರ ಯೋಜನೆಗಳಿಗೆ ಪ್ರಾಮುಖ್ಯತೆ ನೀಡುವುದಾಗಿ ತಿಳಿಸಿದರು. ಸಂಘದ ಮೂಲಕ ತ್ವರಿತ ಮತ್ತು ಸರಳ ವಿಧಾನದಲ್ಲಿ ವಿನೂತನ ಬೆಳೆ ಸಾಲ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರೈತರಿಗೆ ಸರಳ ಸಾಲ–ವಿಮೆ ಸೌಲಭ್ಯ ಭರವಸೆ
ಮೂರು ವರ್ಷಗಳ ಅವಧಿಗೆ ಸಾಲ ಮಿತಿ ಮಂಜೂರಾತಿ ಮಾಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಅವರು ತಿಳಿಸಿದರು. ಮಂಜೂರಾದ ಸಾಲ ಮಿತಿಯೊಳಗೆ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಬೇಕಾದಾಗ ಸಾಲ ಪಡೆಯುವ ಮತ್ತು ಮರುಪಾವತಿ ಮಾಡುವ ಸೌಲಭ್ಯ ಕಲ್ಪಿಸಲಾಗುವುದು ಎಂದರು. ರೈತರು ಬಳಸಿದ ಅವಧಿಗೆ ಮಾತ್ರ ಬಡ್ಡಿ ಪಾವತಿಸುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು. ಇದರ ಜೊತೆಗೆ ರೈತರಿಗೆ ವಿಮೆ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದಾಗಿ ಭರವಸೆ ನೀಡಿದರು. ಸೂಚಿತ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯಗಳನ್ನು ಸಮರ್ಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವುದಾಗಿ ಹೇಳಿದರು.
