Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I ಬೆಂಗಳೂರು,  : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಕುರಿತು…

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I

ಬೆಂಗಳೂರು,  : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಕುರಿತು ಎದ್ದಿರುವ ಪ್ರಶ್ನೆಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಜಮೀನು ಹಂಚಿಕೆಯ ಪ್ರಕ್ರಿಯೆ ಮತ್ತು ದರ ನಿಗದಿಯ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಮಂಜೂರು ಮಾಡಲು ಸಚಿವ ಸಂಪುಟವು ತೀರ್ಮಾನಿಸಿದೆ.

ತುಮಕೂರಿನಲ್ಲಿ ಬೃಹತ್ ಜಮೀನು ಹಂಚಿಕೆ ಮತ್ತು ದರ ವಿವರ:
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಿರುವ ಕುರಿತು ತುಮಕೂರು ತಾಲ್ಲೂಕು, ಕಸಬ ಹೋಬಳಿ, ಮರುಳೂರು ಗ್ರಾಮದ ಸರ್ವೆ ನಂ. 87/2 ರಲ್ಲಿ ಒಟ್ಟು 02 ಎಕರೆ ಜಮೀನನ್ನು ಉಪನೋಂದಣಾಧಿಕಾರಿಗಳ 2023-24ನೇ ಸಾಲಿನ ಮಾರ್ಗಸೂಚಿ ದರದಂತೆ ಪ್ರತಿ ಎಕರೆಗೆ ರೂ. 1,70,00,000/- (ಒಂದು ಕೋಟಿ ಎಪ್ಪತ್ತು ಲಕ್ಷ ರೂ.) ನಿಗದಿಪಡಿಸಲಾಗಿದೆ. ಸಚಿವ ಸಂಪುಟದ ಪ್ರಕರಣ ಸಂಖ್ಯೆ: ಸಿ 396/2025, ದಿನಾಂಕ: 22.05.2025 ರ ನಿರ್ಣಯದಂತೆ, ಪ್ರಸ್ತುತ ಮಾರ್ಗಸೂಚಿ ಮೌಲ್ಯದ ಕೇವಲ ಶೇ. 05 ರಷ್ಟು (5%) ದರವನ್ನು ವಿಧಿಸಿ ಜಮೀನು ಮಂಜೂರು ಮಾಡಲಾಗಿದೆ.

ಇತರ ಜಿಲ್ಲೆಗಳ ಸ್ಥಿತಿಗತಿ:

ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸದ್ಯಕ್ಕೆ ಯಾವುದೇ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಕಾನೂನುಬದ್ಧತೆ ಮತ್ತು ಆಕ್ಷೇಪಣೆಗಳಿಲ್ಲ:
ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ಕಂದಾಯ ಇಲಾಖೆ:

ಈ ಮಂಜೂರಾತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಯಾವುದೇ ರೀತಿಯ ತಕರಾರುಗಳು ಅಥವಾ ಆಕ್ಷೇಪಣೆಗಳು ಸ್ವೀಕೃತವಾಗಿಲ್ಲ. ಈ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂಬ ಬಗ್ಗೆ ಯಾವುದೇ ದೂರುಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಯಾವುದೇ ದೂರುಗಳು ಅಥವಾ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಿಲ್ಲದ ಕಾರಣ, ಈ ಮಂಜೂರಾತಿಯನ್ನು ರದ್ದುಪಡಿಸುವ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ ಎಂದು ಸಚಿವರು ತಿಳಿಸಿದರು.

Gara Srinivas

Gara Srinivas

Leave a comment

error: Content is protected !!