Wednesday, 4 November 2026 — Suryagagana
06:40 AM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಮಡಿವಾಳ ಜಾತಿಯನ್ನು ಪರಿಶಿಷ್ಟ ಮೀಸಲಾತಿ ಪಟ್ಟಿಗೆ ಸೇರಿಸಲು I 12 ರಂದು ಸಭೆ I

I ಮಡಿವಾಳ ಜಾತಿಯನ್ನು ಪರಿಶಿಷ್ಟ ಮೀಸಲಾತಿ ಪಟ್ಟಿಗೆ ಸೇರಿಸಲು I 12 ರಂದು ಸಭೆ I ಶಿವಮೊಗ್ಗ: ಮಡಿವಾಳ ಜಾತಿಯನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಅನೇಕ ದಶಕಗಳಿಂದ ಒತ್ತಾಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಡಿವಾಳ ಸಂಘ ಮತ್ತು ಎಸ್.ಸಿ.ಹೋರಾಟ…

I ಮಡಿವಾಳ ಜಾತಿಯನ್ನು ಪರಿಶಿಷ್ಟ ಮೀಸಲಾತಿ ಪಟ್ಟಿಗೆ ಸೇರಿಸಲು I 12 ರಂದು ಸಭೆ I

ಶಿವಮೊಗ್ಗ: ಮಡಿವಾಳ ಜಾತಿಯನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಅನೇಕ ದಶಕಗಳಿಂದ ಒತ್ತಾಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಡಿವಾಳ ಸಂಘ ಮತ್ತು ಎಸ್.ಸಿ.ಹೋರಾಟ ಸಮಿತಿಯ ನೇತೃತ್ವದಲ್ಲಿ ಮಾ. 12 ರಂದು ಗುರುವಾರ ಬೆಂಗಳೂರಿನ ಯಶವಂತಪುರ ದಲ್ಲಿರುವ ಮುನಿಸ್ವಾಮಪ್ಪ ಕಲ್ಯಾಣ ಮಂದಿರದಲ್ಲಿ ಆಯೋಜಿಸಿರುವ ಪೂರ್ವಭಾವಿ ಸಭೆಗೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಡಿವಾಳ ಸಮಾಜದ ಪ್ರಮುಖರು ಭಾಗವಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಮಡಿವಾಳ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷರಾದ  ಬಾಲಾಜಿರಾಜ್ ರವರ ಅಧ್ಯಕ್ಷತೆಯಲ್ಲಿ ಮಾರ್ಚ್ 9 ರಂದು ಸೋಮವಾರ ಸಂಜೆ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು. ಹಾಗೂ ಡಾ. ಅನ್ನಪೂರ್ಣಮ್ಮರವರ ವರದಿ ಅನುಸಾರ ಕರ್ನಾಟಕ ರಾಜ್ಯದಲ್ಲಿ ಮಡಿವಾಳ ಜಾತಿಯನ್ನು ಪರಿಶಿಷ್ಟರ ಪಟ್ಟಿಗೆ ತಕ್ಷಣ ಸೇರ್ಪಡೆ ಮಾಡಲು ರಾಜ್ಯ ಸರ್ಕಾರದ ಮಂತ್ರಿಮಂಡಲದ ಸಭೆ ತೀರ್ಮಾನ ಮಾಡುವುದರ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಪಡಿಸಲಾಯಿತು.

ಮಡಿವಾಳ ಸಮಾಜದ ಭವಿಷ್ಯದ ಉಳುವಿಗಾಗಿ ಮೀಸಲಾತಿ ಪಡೆಯಲು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ಮತ್ತು ಎಸ್.ಸಿ.ಮೀಸಲಾತಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲು ಹಾಗೂ ಹೋರಾಟದ ಕಿಚ್ಚು ಜಾಗೃತಿಗೊಳಿಸಲು ಕರ್ನಾಟಕ ರಾಜ್ಯ ಮಡಿವಾಳ ಸಂಘ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆ ಮಹತ್ವದ್ದಾಗಿದೆ. ಆದ್ದರಿಂದ ಈ ಸಭೆಗೆ ಶಿವಮೊಗ್ಗ ಜಿಲ್ಲೆಯಲ್ಲಿರುವ ಮಡಿವಾಳ ಸಮಾಜದ ಪ್ರಮುಖರು, ಆಗೂ ರಾಜಕೀಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸಹಕಾರ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಮಡಿವಾಳ ಸಂಘದಿಂದ ಮನವಿ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಅಶೋಕ್‌ ಕುಮಾರ್‌ರವರು ಮನವಿ ಮಾಡಿಕೊಂಡಿದ್ದಾರೆ

Gara

Gara

Leave a comment

error: Content is protected !!