Friday, 6 November 2026 — Suryagagana
09:25 AM
ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I
ಸೂರ್ಯಗಗನ

I ಜೆ.ಎನ್‌.ಎನ್‌.ಸಿ.ಇ I  ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ I

I ಜೆ.ಎನ್‌.ಎನ್‌.ಸಿ.ಇ I  ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ I ಶಿವಮೊಗ್ಗ: ನಗರದ ಜೆ.ಎನ್‌.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೈಟ್ ಬ್ರಿಗೇಡ್ ಕ್ಲಬ್ ವತಿಯಿಂದ ಹ್ಯಾಕ್‌ಫೆಸ್ಟ್ 1.0 – ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ ಕಾರ್ಯಕ್ರಮವನ್ನು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು…

I ಜೆ.ಎನ್‌.ಎನ್‌.ಸಿ.ಇ I  ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ I

ಶಿವಮೊಗ್ಗ: ನಗರದ ಜೆ.ಎನ್‌.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೈಟ್ ಬ್ರಿಗೇಡ್ ಕ್ಲಬ್ ವತಿಯಿಂದ ಹ್ಯಾಕ್‌ಫೆಸ್ಟ್ 1.0 – ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ ಕಾರ್ಯಕ್ರಮವನ್ನು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 150 ತಂಡಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ, ತಮ್ಮ ನವೀನ ತಾಂತ್ರಿಕ ಯೋಜನೆಗಳನ್ನು ನಿರ್ಮಿಸಿ ಪ್ರಸ್ತುತಪಡಿಸಿದರು.
ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ನಂದಾ ಕಾಲೇಜ್‌ ಆಫ್‌ ಟೆಕ್ನಾಲಜಿ ತಂಡ (ಪ್ರಥಮ), ಮೈಸೂರಿನ ಜೆ.ಎಸ್.ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ತಂಡ (ದ್ವಿತೀಯ), ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್‌ ಆಪ್‌ ಇಂಜಿನಿಯರಿಂಗ್‌ ಕಾಲೇಜು (ತೃತೀಯ) ಸ್ಥಾನ ಪಡೆದಿದರು. ಬಹುಮಾನ ವಿಜೇತ ತಂಡಕ್ಕೆ ತಲಾ 30 ಸಾವಿರ, 20 ಸಾವಿರ, 10 ಸಾವಿರ ರೂಪಾಯಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಪೇಗಾ ಸಂಸ್ಥೆಯ ಹಿರಿಯ ಮೆಷಿನ್ ಲರ್ನಿಂಗ್ ಇಂಜಿನಿಯರ್ ಕಾರ್ತಿಕ್.ಎಲ್.ನಾಗರ್ ಮಾತನಾಡಿ, ಕೃತಕ ಬುದ್ದಿಮತ್ತೆಯು ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಕ್ಷೇತ್ರಕ್ಕೆ ಮಹತ್ವದ ಪಾತ್ರ ವಹಿಸುತ್ತದೆ. ಎಐ ಉಪಕರಣಗಳು ವಿದ್ಯಾರ್ಥಿಗಳಿಗೆ ವೇಗವಾಗಿ ಕಲಿಯಲು, ಹೊಸ ಆಲೋಚನೆಗಳನ್ನು ಅನ್ವೇಷಿಸಲು ಹಾಗೂ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಎನ್‌ಇಎಸ್‌ ಕಾರ್ಯದರ್ಶಿ ಎಸ್.ಎನ್‌.ನಾಗರಾಜ ಮಾತನಾಡಿ, ಹ್ಯಾಕಥಾನ್ ಎಂಬುದು ವಿದ್ಯಾರ್ಥಿಗಳಿಗೆ ತಮ್ಮ ಸೃಜನಶೀಲತೆ, ತಾಂತ್ರಿಕ ಪರಿಣಿತಿ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು. ಎನ್‌ಇಎಸ್‌ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಬಹುಮಾನ ವಿವರಿಸಿದರು‌. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಉಜ್ವಲಾ ಬಿ.ಎಸ್, ಸಂಯೋಜಕರಾದ ಹೃಷಿಕೇಶ್ ಕೆಂಭಾವಿ, ಸಹ ಸಂಯೋಜಕರಾದ ಮಲ್ಲಿಕಾರ್ಜುನ ಎಸ್ ಸಿಂದಿಗೆರೆ ಮತ್ತು ಬೈಟ್ ಬ್ರಿಗೇಡ್ ಸದಸ್ಯರು ಉಪಸ್ಥಿತರಿದ್ದರು.
Gara

Gara

Leave a comment

error: Content is protected !!