Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I
ಸೂರ್ಯಗಗನ

I ಅನ್ಯಾಯದ ವಿರುದ್ದ ಧ್ವನಿಯಾದ ಯುಗಪುರುಷ ಅಂಬೇಡ್ಕರ್ I ಸಂಸದ ಬಿ.ವೈ.ರಾಘವೇಂದ್ರ I

I ಅನ್ಯಾಯದ ವಿರುದ್ದ ಧ್ವನಿಯಾದ ಯುಗಪುರುಷ ಅಂಬೇಡ್ಕರ್ I ಸಂಸದ ಬಿ.ವೈ.ರಾಘವೇಂದ್ರ I ಶಿವಮೊಗ್ಗ, :  ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ ಯುಗಪುರುಷ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ‌ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಹಾನಗರ ಪಾಲಿಕೆ, ಕನ್ನಡ…

I ಅನ್ಯಾಯದ ವಿರುದ್ದ ಧ್ವನಿಯಾದ ಯುಗಪುರುಷ ಅಂಬೇಡ್ಕರ್ I ಸಂಸದ ಬಿ.ವೈ.ರಾಘವೇಂದ್ರ I

ಶಿವಮೊಗ್ಗ, :  ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ ಯುಗಪುರುಷ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ‌ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು.

ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕ‌ರವರ135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

ಅಂಬೇಡ್ಕರ್ರವರ ತತ್ವಗಳು, ಆದರ್ಶಗಳು ಹಾಗೂ ಮೌಲ್ಯಗಳು ಉದಾತ್ತವಾಗಿದ್ದು, ನಾವೆಲ್ಲ ಅದೇ ಸಂಕಲ್ಪ ಮಾಡಿ ಅವನ್ನು ಮುನ್ನಡೆಸಿಕೊಂಡು‌ ಹೋಗಬೇಕಿದೆ. ಅತ್ಯಂತ ಸುಶಿಕ್ಷಿತರಾಗಿದ್ದ ಅವರು ಶ್ರೇಷ್ಟ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿದ್ದಾರೆ. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯರಾದ ಇವರು ಅತ್ಯಂತ ಮೇಧಾವಿ. ಅಸಮಾನತೆ ವಿರುದ್ದ ಧ್ವನಿ ಎತ್ತಿ, ಮಹಿಳಾ ಹಕ್ಕುಗಳಿಗೆ ಹೋರಾಡಿ, ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಹಕ್ಕುಗಳನ್ನು‌ ನೀಡಿದರು. ಇಂದಿನ‌ ಯುವಜನತೆ ಅಂಬೇಡ್ಕರ್ ರವರ ಜೀವನ ಚರಿತ್ರೆ, ಅವರ ಸಾಹಿತ್ಯವನ್ನು ಓದಿ ತಿಳಿದರೆ ಸಾಕು, ಖಿನ್ನತೆಯಿಂದ ಹೊರ ಬರಬಹುದು ಎಂದ ಅವರು ಅಂಬೇಡ್ಕರ್ ರವರ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ಕೇಲವ ವ್ಯಕ್ತಿಯಲ್ಲ ಅವರೊಬ್ಬ ಶಕ್ತಿ. ಅಸ್ಪೃಶ್ಯತೆ ನಿವಾರಣೆ ಮಾಡಿ, ಸರ್ವಧರ್ಮಗಳು ಸಮ ಭಾವದಿಂದ ಬದುಕಬೇಕೆಂಬ ಸಂವಿಧಾನ ನೀಡಿದ ಮಹಾನ್ ಚೇತನ. ಬಿದ್ದವರನ್ನು ಮೇಲೆತ್ತಿ, ಅಸ್ಪೃಶ್ಯತೆ ವಿರುದ್ದ ಗಟ್ಟಿಯಾಗಿ ಧ್ವನಿ ಎತ್ತಿದ ಅಂಬೇಡ್ಕರ್ ರವರ ಮೊದಲ ಸೂತ್ರ ಶಿಕ್ಷಣವಾಗಿದ್ದು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಭಾರತೀಯ ಸಂವಿಧಾನ ರಚನೆ ಮುನ್ನ ನಮ್ಮ ದೇಶದ ಪ್ರತಿ ಅಂಶಗಳನ್ನು ಅಧ್ಯಯನ ಮಾಡಿ, ಸರ್ವಧರ್ಮಗಳು ಸಮವೆಂದು ಸಾರುವ ಅಂಶಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಪ್ರಾತಸ್ಮರಣೀಯರಾಗಿದ್ದಾರೆ.

ದೇಶಕ್ಕಾಗಿ ಬದುಕಿದ ಅವರ ಕಾರ್ಯಗಳು ಎಂದಿಗೂ ಜೀವಂತ. ಪ್ರತಿಭಟನೆ ಮೂಲಕ ಅಸ್ಪೃಶ್ಯರಿಗೆ ಮಂದಿರಗಳಿಗೆ ಪ್ರವೇಶ ಕೊಡಿಸಿದರು. ಎಲ್ಲರನ್ನೂ ಒಂದುಗೂಡಿಸುವ ಕೆಲಸ ಮಾಡಿದರು. ಅವರ ಜೀವನವೇ ಹೋರಾಟವಾಗಿದ್ದು, ಯಾರೇ ಆಗಲಿ ಯಾವುದೇ ಮಠ, ಮಂದಿರಕ್ಕೆ ಯಾವಾಗಲಾದರೂ ಹೋಗಬಹುದು, ಯಾವುದೇ ಕೇರಿಯಲ್ಲಿ ಬಾವಿ ನೀರು ಕುಡಿಯುವಂತೆ ಮಾಡುವ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡಿದರು. ಇಂತಹ ಭವ್ಯ ಭಾರತದ ಅಭಿವೃದ್ಧಿಯ ತೇರನ್ನು ನಾವೆಲ್ಲ ಸೇರಿ ಎಳೆಯಬೇಕಿದೆ ಎಂದರು.

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ರವರು ದೈವದತ್ತ ಕೊಡುಗೆ. ನಮ್ಮ‌ ಸಂವಿಧಾನಕ್ಕೆ ಮಹಾನ್ ಶಕ್ತಿ ಇದ್ದು, ಪರಿಣಾಮಕಾರಿಯಾಗಿ ನಾವೆಲ್ಲ ಅನುಷ್ಠಾನ ಮಾಡಿಕೊಂಡು ಹೋಗಬೇಕಿದೆ. ನಮ್ಮೆಲ್ಲರಿಗೆ ಧ್ವನಿ‌ ನೀಡಿದ ಮಹಾನ್ ಚೇತನವು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕು. ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಗಾಗಿ ವಿಶೇಷವಾಗಿ ಹೋರಾಡಿದ ಶಕ್ತಿ ಅವರು ಎಂದು ಸ್ಮರಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಡಾ.ನಾಗೇಶ್ ಬಿದರಗೋಡು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರ ವಿಷಯದಲ್ಲಿ ವಿಜೃಂಭಣೆಗಿಂತ ವಿಚಾರ ಮುಖ್ಯ, ಆರಾಧನೆಗಿಂತ ಆಚರಣೆ ಮುಖ್ಯವಾಗಬೇಕು. ಅಂಬೇಡ್ಕರ್ ಪ್ರಜ್ಞೆಯಾಗಿ ನಮ್ಮೊಳಗೆ ಇರಬೇಕು. ಯಾವ ಮಾನದಂಡಗಳಲ್ಲೂ ಅವರನ್ನು ಅಳೆಯಲು ಸಾಧ್ಯವಿಲ್ಲ. ಅಗತ್ಯವಿರುವುದನ್ನು ಹುಟ್ಟುಹಾಕಿದರು.

ಸಂಘರ್ಷದ ಹಾದಿಗಿಂತ ಸಂವಾದದ ಹಾದಿ ಅವರದ್ದಾಗಿತ್ತು. ಮನುಷ್ಯರು ಮನುಷ್ಯರ ಮುಂದೆ ಸಮಾನವಾಗಿರಬೇಕು ಎಂಬುದು ಅವರ ನಡೆಯಾಗಿತ್ತು. ಶಿಕ್ಷಣ ಪಡಯಿರಿ, ಸಂಘಟಿತರಾಗಿ ಹೋರಾಡಿ ಎಂಬುದು ಅವರ ಮೂಲಮಂತ್ರವಾಗಿತ್ತು. ಮಹಿಳೆಯರನ್ನು ಈ ದೇಶದ ಪ್ರಗತಿಯ ಮಾನದಂಡವಾಗಿ ಎತ್ತಿ ಹಿಡಿದವರು ಅಂಬೇಡ್ಕರ್ ಎಂದರು. ಈಗಲೂ ಅಸಮಾನತೆ ಇದೆ. ನಮ್ಮ ಎದೆಯೊಳಗೆ ಅಂಬೇಡ್ಕರ್ ಇಳಿಯದ ಹೊರತು, ಅವರನ್ನು ಅನುಸರಿಸದ ಹೊರತು ಅಸಮಾನತೆ ಹೋಗಲಾಡಿಸಲು ಸಾಧ್ಯವಿಲ್ಲ. ಮನುಷ್ಯರಾಗಲು ಹಿಂದೆ ಉಳಿದಿದ್ದು, ಆ ನಿಟ್ಟಿನಲ್ಲಿ‌ ನಾವು ಮುಂದೆ ಸಾಗಬೇಕಿದೆ.

ಅಂಬೇಡ್ಕರ್ ಕಂಡ ಕನಸಿನೆಡೆ ನಮ್ಮ‌ಹೆಜ್ಜೆ ಇರಿಸಬೇಕಿದೆ. ಕಿರಿಯ ತಲೆಮಾರು ಅವರ ದಾರಿಯಲ್ಲಿ ಸಾಗಬೇಕಿದೆ ಎಂದರು. ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ಜವಳಿ‌ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳು) ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ಸೂಡಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ. ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಸಮಾಜ‌ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Gara Srinivas

Gara Srinivas

Leave a comment

error: Content is protected !!