Sunday, August 2, 2026
Homeಸೂರ್ಯಗಗನI ಕೆ.ಆರ್. ನಗರ ತಾಲೂಕಿನಲ್ಲಿ ನೀರಿನ ಸಮಸ್ಯೆ I ಬಗೆಹರಿಸಲು ತೇಜಸ್ವಿ ನಾಗಲಿಂಗಸ್ವಾಮಿ ಮನವಿ I

I ಕೆ.ಆರ್. ನಗರ ತಾಲೂಕಿನಲ್ಲಿ ನೀರಿನ ಸಮಸ್ಯೆ I ಬಗೆಹರಿಸಲು ತೇಜಸ್ವಿ ನಾಗಲಿಂಗಸ್ವಾಮಿ ಮನವಿ I

I ಕೆ.ಆರ್. ನಗರ ತಾಲೂಕಿನಲ್ಲಿ ನೀರಿನ ಸಮಸ್ಯೆ I ಬಗೆಹರಿಸಲು ತೇಜಸ್ವಿ ನಾಗಲಿಂಗಸ್ವಾಮಿ ಮನವಿ I

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನಲ್ಲಿ ಬೇಸಿಗೆಯ ಬಿಸಿಲಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಬೇಸರ‌ ವ್ಯಕ್ತಪಡಿಸಿದ್ದಾರೆ.

ಮಳೆ ಕೊರತೆ, ಕೆಆರ್‌ಎಸ್‌ ಜಲಾಶಯದ ನೀರು ತಗ್ಗಿದ ಕಾರಣ ಪಟ್ಟಣ ಮತ್ತು ಗ್ರಾಮೀಣ ಭಾಗಗಳು ಸೇರಿದಂತೆ ಹಲವೆಡೆ ನೀರಿನ ಅಭಾವ ತಲೆದೋರಿ ಜನಜೀವನ ಅಸ್ತವ್ಯಸ್ತ ಆಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಸ್ಥಳಿಯ ಶಾಸಕರಾದ ಡಿ. ರವಿಶಂಕರ್ ಅವರು ಕೂಡಲೇ ಅಧಿಕಾರಿಗಳಿಗೆ ಆದೇಶ ನೀಡಿ ಪರ್ಯಾಯ ವ್ಯವಸ್ಥೆಗಳನ್ನು ಮಾಡುವಂತೆ ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸಿದ್ದಾರೆ.

ಬೇಸಿಗೆ ಹೆಚ್ಚಾದಂತೆ ಕುಡಿಯುವ ನೀರಿನ ಸಮಸ್ಯೆ ಸಹಜವಾಗಿ ಹೆಚ್ಚಾಗುತ್ತದೆ ಈಗಾಗಲೇ ಪಟ್ಟಣ ಮಟ್ಟದಲ್ಲಿ ನಾಲ್ಜೈದು ದಿನಗಳಿಗೊಮ್ಮೆ ನೀರು ಬಿಡುತ್ತಿದ್ದು ಕೆಲವೊಮ್ಮೆ ಒಂದು ವಾರಕಳೆದರು ನೀರು ಬಿಡದ ಕಾರಣ ಜನರಿಗೆ ತೀವ್ರವಾಗಿ ತೊಂದರೆ ಉಂಟಾಗಿದೆ.

ಶಾಸಕರಾದ ಡಿ, ರವಿಶಂಕರ್ ಅವರು ಈಗಾಗಲೇ ಹಳೆ ಎಡತೊರೆಯ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಶಾಸಕರು ಶೀಘ್ರ ಕ್ರಮ ಕೈಗೊಂಡು ಟ್ಯಾಂಕರ್ ಗಳ ಮೂಲಕ ಮನೆಗಳಿಗೆ ನೀರು ಪೂರೈಸುವಂತೆ ತೇಜಸ್ವಿ ನಾಗಲಿಂಗಸ್ವಾಮಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I