I ಶಿವಮೊಗ್ಗ ಪಿಯುಸಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ I ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ I
ಶಿವಮೊಗ್ಗ : ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯವಾಗುತ್ತದೆ. ಸಾಧನೆಗೆ ಬೇಕಾದ ಎಲ್ಲವೂ ನಮ್ಮೊಳಗೇ ಇರುತ್ತದೆ, ಇದು ನಿರಂತರವಾಗಿರಬೇಕಷ್ಟೆ, ಎಂದು ಸದ್ಭಾವನ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡ ಹೇಳಿದರು,
ಅವರು ಇಂದು ಬೆಳಗ್ಗೆ ಸದ್ಭಾವನ ಟ್ರಸ್ಟ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಅವರು, ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಅವರು ಇನ್ನಷ್ಟು ಎತ್ತರ ಸಾಧಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಪಿಯುಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಬೃಂದಾ – 590 (98.33%), ರಂಜಿತಾ.ಜಿ – 596 (99.33%), ವಶಿಷ್ಟ ಎನ್.ಎಸ್. – 595 (99.17%), ಮಹಿನ್ ಖಾನಂ ಆಫ್ರಿದಿ – 596 (99.33%), ಸೋನಿಯಾ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ, ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಬಸವರಾಜ, ಮಂಜುನಾಥ್ ನವುಲೆ, ಜಿಲ್ಲಾ ಅಲೆಮಾರಿ ನಿಗಮದ ಅನುಷ್ಠಾನ ಸಮಿತಿ ಸದಸ್ಯ ಸಂದೀಪ್, ಶಿವಕುಮಾರ್, ಅನಿಲ್ ಆಚಾರ್, ಭರತ್, ಅವಿನಾಶ್, ಕುರುವಳ್ಳಿ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




