I ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ ವಾತಾವರಣ I
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಆಲಿಸುವಲ್ಲಿ ಆಡಳಿತ ಮಂಡಳಿ ಪದೇ ಪದೇ ವಿಫಲವಾಗುತ್ತಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಕಾರ್ಯಕರ್ತರು ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದರು. ಕಚೇರಿಯ ನಾಮಫಲಕಗಳಿಗೆ ಮಸಿ ಬಳಿದ ಪ್ರತಿಭಟನಾಕಾರರು, ಪೀಠೋಪಕರಣ ಹಾಗೂ ಪಾಟ್‌ಗಳನ್ನು ಧ್ವಂಸಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಲವಾರು ಬಾರಿ ಮನವಿ ಸಲ್ಲಿಸಿದರೂ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಮುಂದುವರಿಸುತ್ತಿರುವುದೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳೀಯ ಪೊಲೀಸರು ಈ ಕುರಿತಂತೆ, ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.


