Sunday, August 2, 2026
Homeಸೂರ್ಯಗಗನI ಅಣು ವಿದ್ಯುತ್ ಸ್ಥಾವರ ಸ್ಥಾಪನೆ ತಕ್ಷಣ ಕೈಬಿಡಿ I ಜಿಲ್ಲಾಡಳಿತಕ್ಕೆ ನಾಗರೀಕ ಹಕ್ಕುಗಳ ರಕ್ಷಣಾ...

I ಅಣು ವಿದ್ಯುತ್ ಸ್ಥಾವರ ಸ್ಥಾಪನೆ ತಕ್ಷಣ ಕೈಬಿಡಿ I ಜಿಲ್ಲಾಡಳಿತಕ್ಕೆ ನಾಗರೀಕ ಹಕ್ಕುಗಳ ರಕ್ಷಣಾ ಸಂಘಟನೆ ಮನವಿ I

I ಅಣು ವಿದ್ಯುತ್ ಸ್ಥಾವರ ಸ್ಥಾಪನೆ ತಕ್ಷಣ ಕೈಬಿಡಿ I ಜಿಲ್ಲಾಡಳಿತಕ್ಕೆ ನಾಗರೀಕ ಹಕ್ಕುಗಳ ರಕ್ಷಣಾ ಸಂಘಟನೆ ಮನವಿ I

ಶಿವಮೊಗ್ಗ: ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿ ನಾಗರೀಕ ಹಕ್ಕುಗಳ ರಕ್ಷಣಾ ಸಂಘಟನೆ ( ಎಪಿಸಿಆರ್) ಜಿಲ್ಲಾ ಘಟಕ ವತಿಯಿಂದ ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಬೇಸೂರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಾಖ ವಿದ್ಯುತ್ ನಿಗಮವು (NTPC) ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ನಡೆಸುತ್ತಿರುವ ತೆರೆಮರೆಯ ಸಿದ್ಧತೆಗಳು ಸ್ಥಳೀಯ ಜನರಲ್ಲಿ ತೀವ್ರ ಆತಂಕವನ್ನುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಕಳೆದ ಜನವರಿ 31 ರಂದು NTPC ಈ ಬಗ್ಗೆ ರಾಜ್ಯಸರ್ಕಾರಕ್ಕೆ ಪತ್ರ ಬರೆದಿರುವುದು ಹಾಗು ಇತ್ತೀಚೆಗೆ ಬೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವುದು ಈ ಆತಂಕಕ್ಕೆ ಪುಷ್ಠಿ ನೀಡಿದೆ. ಈ ಯೋಜನೆಯಡಿ ಸುಮಾರು 1,200 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅದರಲ್ಲಿ 485 ಎಕರೆ ಗೋಮಾಳ ಮತ್ತು 900 ಎಕರೆಗೂ ಅಧಿಕ ದಟ್ಟ ಅರಣ್ಯ ಹಾಗೂ ಕಂದಾಯ ಭೂಮಿ ಒಳಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸರ್ವೆ ನಂಬರ್ 104, 94, 80, 82 ಸೇರಿದಂತೆ ಹತ್ತಾರು ಜಮೀನುಗಳ ವಿವರಗಳನ್ನು ತಾಲೂಕು ಆಡಳಿತವು ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿರುವುದು ಯೋಜನೆ ಬಗೆಗೆ ಇನ್ನಷ್ಟು ಗುಮಾನಿಯನ್ನು ಎತ್ತಿ ತೋರಿಸುತ್ತಿದೆ.

ಈ ಭಾಗದ ಜನರು ದಶಕಗಳ ಹಿಂದೆ ಲಿಂಗನಮಕ್ಕಿ, ಚಕ್ರಾ, ಸಾವೆಹಕ್ಲು ಮತ್ತು ಮಾಣಿ ಅಣೆಕಟ್ಟುಗಳ ನಿರ್ಮಾಣದಿಂದಾಗಿ ತಮ್ಮ ನೆಲೆ ಕಳೆದುಕೊಂಡು ನಿರಾಶ್ರಿತರಾದ ಕಹಿ ನೆನಪುಗಳನ್ನು ಹೊಂದಿದ್ದಾರೆ. ಅಂದು ಸಂತ್ರಸ್ತರಾದ ಸಾವಿರಾರು ಕುಟುಂಬಗಳಿಗೆ ಇಂದಿಗೂ ಸರಿಯಾದ ಪುನರ್ವಸತಿ ಅಥವಾ ತಾವು ವಾಸಿಸುತ್ತಿರುವ ಭೂಮಿಗೆ ಹಕ್ಕುಪತ್ರಗಳು ದೊರೆತಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ಹಾಗೂ ಶರಾವತಿ ಹಿನ್ನೀರಿನ ವ್ಯಾಪ್ತಿಯಲ್ಲಿ ಅಣು ಸ್ಥಾವರದಂತಹ ವಿನಾಶಕಾರಿ ಯೋಜನೆಯನ್ನು ತರುವುದು ಸ್ಥಳೀಯ ಜನರ ಬದುಕು ಮತ್ತು ಸಾವಿನ ಪ್ರಶ್ನೆಯಾಗಿ ಪರಿಣಮಿಸಿದೆ. ಅಧಿಕಾರಿಗಳು ಸ್ಥಳ ಲಭ್ಯತೆಯ ವರದಿಯನ್ನು ಈಗಾಗಲೇ ಸಲ್ಲಿಸಿದ್ದರೂ ಸಾರ್ವಜನಿಕರಿಗೆ ಯಾವುದೇ ಸ್ಪಷ್ಟ ಮಾಹಿತಿ ನೀಡದೆ ಗೌಪ್ಯತೆ ಕಾಯ್ದುಕೊಳ್ಳುತ್ತಿರುವುದು ಜನರಲ್ಲಿ ಆಡಳಿತದ ವಿರುದ್ಧ ಅಸಮಾಧಾನ ಮೂಡಲು ಕಾರಣವಾಗಿದೆ.

ಚಕ್ರ ಸಾವೇ ಹಕ್ಕಲು ಡ್ಯಾಮ್ ಪಕ್ಕದಲ್ಲಿ ಮಡೆನೂರು ಡ್ಯಾಮ್ ಕೂಡ ಸೇರಿಸಿ, ಉದ್ದೇಶಿತ ಅಣುಸ್ಥಾವರ ಸ್ಥಾಪನೆ ಯಾದಲ್ಲಿ ಜೋಗ ಮತ್ತು ಮಡೆನೂರು ಡ್ಯಾಮ್ ನಿರ್ಮಾಣದಿಂದ ಮನೆಮಠ ಕಳೆದುಕೊಂಡು ಪುನರ್ವಸತಿ ಆಗದ ಸಾವಿರಾರು ಕುಟುಂಬಗಳಿಗೆ ಮತ್ತೆ ಬರೆ ಎಳೆದಂತಾಗುತ್ತದೆ. ಈ ಪ್ರದೇಶ ಕಾಯ್ದಿಟ್ಟ ಅರಣ್ಯ ಆಗಿರುವುದರಿಂದ ಇಲ್ಲಿ ವಾಸಿಸುವ ಲಕ್ಷಾಂತರ ಜಲಚರ ಪ್ರಾಣಿಗಳಿಗೆ, ಪಕ್ಷಿಗಳಿಗೆ, ಜನಜೀವನಕ್ಕೆ, ಜಾನುವಾರುಗಳಿಗೆ ತೊಂದರೆಯಾಗುತ್ತದೆ. ಇತ್ತೀಚೆಗೆ ನಿರ್ಮಾಣವಾದ ಸಿಗಂದೂರು ಸೇತುವೆ ಮತ್ತು ಜೋಗ ಡ್ಯಾಮ್ ಗಳಿಗೂ ಈ ಅಣು ಸ್ಥಾವರ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಅಪಾಯವಾಗುವ ಸೂಚನೆಗಳಿವೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಇದರಿಂದ ತೊಂದರೆಯಾಗುತ್ತದೆ.

ಮಲೆನಾಡಿನ ಪರಿಸರ ಮತ್ತು ಜನರ ಹಿತದೃಷ್ಟಿಯಿಂದ ಸಾಗರ ತಾಲೂಕಿನಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆಯ ಪ್ರಸ್ತಾವನೆಯನ್ನು ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸುತ್ತೇವೆ. ದಟ್ಟ ಅರಣ್ಯ ಮತ್ತು ಜೀವವೈವಿಧ್ಯವನ್ನು ನಾಶಮಾಡುವ ಹಾಗೂ ಜನವಸತಿ ಪ್ರದೇಶಕ್ಕೆ ಅಪಾಯಕಾರಿಯಾದ ಈ ಯೋಜನೆಯನ್ನು ನಾವು ಸಾರಾಸಗಟಾಗಿ ವಿರೋಧಿಸುತ್ತೇವೆ. ತಾವು ಕೂಡಲೇ ಜನಸಾಮಾನ್ಯರ ಆತಂಕವನ್ನು ದೂರಮಾಡಿ ಸರ್ಕಾರದ ಮಟ್ಟದಲ್ಲಿ ಈ ಯೋಜನೆಯನ್ನು ರದ್ದುಗೊಳಿಸಲು ಶಿಫಾರಸು ಮಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸಲಾಗಿದೆ.

ಜಿಲ್ಲಾ ಗೌರವ ಅಧ್ಯಕ್ಷ ಆರ್.ಟಿ.ನಟರಾಜ್, ಜಿಲ್ಲಾಧ್ಯಕ್ಷೆ ಸರೋಜಾ ಪಿ.ಚಂಗೊಳ್ಳಿ,ಮೊಹಮ್ಮದ್ ರಫೀ, ಎಸ್.ವಿ.ರಾಜಮ್ಮ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I