September 26, 2026

I ಕೆರೆಗಳ ಒತ್ತುವರಿ ತೆರವಿಗಾಗಿ ಆಗ್ರಹಿಸಿದ I ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಸಂಸ್ಥೆ I

0
IMG-20260512-WA0111(1)

I ಕೆರೆಗಳ ಒತ್ತುವರಿ ತೆರವಿಗಾಗಿ ಆಗ್ರಹಿಸಿದ I ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಸಂಸ್ಥೆ I

ಶಿವಮೊಗ್ಗ : ಕೆರೆಗಳ ಒತ್ತುವರಿ ತೆರವು ಹಾಗೂ ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಸಂಸ್ಥೆಯು ಆಗ್ರಹಿಸಿದೆ
ಜಿಲ್ಲೆಯಲ್ಲಿ ತೀವ್ರವಾಗಿರುವ ಬೇಸಿಗೆಯ ಬಿಸಿಲಿನಿಂದಾಗಿ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಮೂಕ ಪ್ರಾಣಿ-ಪಕ್ಷಿಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ. ಸಿಬ್ಗತ್ ಉಲ್ಲಾ ನೇತೃತ್ವದಲ್ಲಿ  ಸಲ್ಲಿಸಲಾಯಿತು,

ಅವರು ಈ ಸಂದರ್ಭದಲ್ಲಿ ಮಾತನಾಡಿ, ಕೆರೆಗಳ ಸರ್ವೇ ಮತ್ತು ಒತ್ತುವರಿ ತೆರವು, ಶಿವಮೊಗ್ಗ ನಗರದ ಊರುಗಡೂರು, ಮಂಡ್ಲಿ, ಹರಕೆರೆ, ಸೋಮಿನಕೊಪ್ಪ, ಪುರದಾಳು, ಅನಾಪಿನಕಟ್ಟೆ ಮತ್ತು ಅಲ್ಕೋಳ ಭಾಗದ ಕೆರೆಗಳು ವ್ಯಾಪಕವಾಗಿ ಒತ್ತುವರಿಯಾಗಿದ್ದು, ತಕ್ಷಣವೇ ಇವುಗಳನ್ನು ತೆರವುಗೊಳಿಸಿ ಹೂಳೆತ್ತಬೇಕು ಎಂದು ಆಗ್ರಹಿಸಿದರು,

ಜಲಮೂಲಗಳ ಭರ್ತಿ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಕಾಲುವೆ ಅಥವಾ ಟ್ಯಾಂಕರ್‌ಗಳ ಮೂಲಕ ನೀರು ತುಂಬಿಸಿ ವನ್ಯಜೀವಿಗಳನ್ನು ಸಂರಕ್ಷಿಸಬೇಕು, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ-ಪಕ್ಷಿಗಳಿಗಾಗಿ ನೀರಿನ ತೊಟ್ಟಿಗಳನ್ನು ಅಳವಡಿಸಬೇಕು ಎಂದು ತಿಳಿಸಿದರು,

ತುರ್ತು ಆಹಾರ ಕೇಂದ್ರ ಗಾಂಧಿ ಪಾರ್ಕ್, ಕೋಟಿ ಪರಿಸರ ಹಾಗೂ ಗಾಜನೂರು ಅರಣ್ಯದಂಚಿನ ಭಾಗಗಳಲ್ಲಿ ಆಹಾರ ಮತ್ತು ನೀರಿನ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ವಿವರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಪದಾಧಿಕಾರಿಗಳಾದ ದೇವರಾಜ್ ಲೋಕೇಶ್ ಇನ್ನಿತರರು ಉಪಸ್ಥಿತರಿದ್ದರು,

Spread the love

Leave a Reply

Your email address will not be published. Required fields are marked *

error: Content is protected !!