Sunday, August 2, 2026
Homeಸೂರ್ಯಗಗನI ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ I ಮರಳು ಜಪ್ತಿ I

I ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ I ಮರಳು ಜಪ್ತಿ I

I ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ I ಮರಳು ಜಪ್ತಿ I

ತೀರ್ಥಹಳ್ಳಿ : ತಾಲ್ಲೂಕಿನ ಅಗ್ರಹಾರ ಹೋಬಳಿಯ ಅಗಳಬಾಗಿಲು ಗ್ರಾಮದ ಸದಾಶಿವ ದೇವಸ್ಥಾನದ ಸಮೀಪ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 150 ಟನ್‌ಗಿಂತ ಹೆಚ್ಚಿನ ಮರಳನ್ನು ತಹಸೀಲ್ದಾರ್ ರಂಜಿತ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಜಪ್ತಿ ಮಾಡಲಾಯಿತು.

20-05-2026 ರಂದು ನಡೆದ ಕಾರ್ಯಾಚರಣೆಯಲ್ಲಿ ಜೆಸಿಬಿ ಯಂತ್ರದ ಸಹಾಯದಿಂದ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಮರಳು ಸಂಗ್ರಹವನ್ನು ವಶಕ್ಕೆ ಪಡೆಯಲಾಯಿತು. ಸರ್ಕಾರದ ಜಾಗವನ್ನು ದುರುಪಯೋಗಪಡಿಸಿಕೊಂಡು ಮರಳು ಸಂಗ್ರಹಿಸಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆ ತಕ್ಷಣ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಪಿಡಿಒ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿ ಸಿದ್ದರೂಢ ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಕ್ರಮ ಮರಳು ಸಾಗಣೆ ಮತ್ತು ಸಂಗ್ರಹದ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ರಂಜಿತ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I