Sunday, August 2, 2026
Homeಸೂರ್ಯಗಗನI ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ‌ I ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು...

I ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ‌ I ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು I

I ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ‌ I ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು I

ಶಿವಮೊಗ್ಗ, : ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಮಂಜೂರಾಗಿದ್ದ ನೂತನ ‘ಪೊಲೀಸ್ ಜೀಪನ್ನು’ ಗುರುವಾರ (ಇಂದು) ಅಧಿಕೃತವಾಗಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು.

ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ (ಎಸ್.ಪಿ ಆಫೀಸ್) ಆವರಣದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಅವರು ಮತ್ತು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ನೂತನ ವಾಹನ ಹಸ್ತಾಂತರಿಸಿದ ಡಾ. ಧನಂಜಯ ಸರ್ಜಿ

ನೂತನ ವಾಹನ ಹಸ್ತಾಂತರಿಸಿ ಮಾತನಾಡಿದ ಡಾ. ಧನಂಜಯ ಸರ್ಜಿ ಅವರು, “ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನೇ ದಿನೇ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ಅಪರಾಧಗಳ ನಿಯಂತ್ರಣ ಹಾಗೂ ಸಾರ್ವಜನಿಕರ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಲು ಪೊಲೀಸರಿಗೆ ಸುಸಜ್ಜಿತ ವಾಹನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ನನ್ನ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಜಮ್ ಪೋರ್ಟಲ್ ಮೂಲಕ 7.2 ಲಕ್ಷದಲ್ಲಿ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪನ್ನು ಒದಗಿಸಿದ್ದೇವೆ, ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಶೇ 22% ರಿಂದ 25% ವಾಹನದ ಕೊರತೆ ಇದೆ, ಜಯನಗರ ಪೊಲೀಸ್ ಠಾಣೆ ಇರುವ ಜಾಗಕ್ಕೆ ಒಂದು ಇತಿಹಾಸ ಇದೆ, ಠಾಣೆ ಇರುವ ಜಾಗದಲ್ಲಿ ಜಿಲ್ಲೆಯ ಮೊದಲ ನ್ಯಾಯಾಲಯ ಇತ್ತು. ನಮ್ಮ ಸರ್ಜಿ ಆಸ್ಪತ್ರೆಯ ವತಿಯಿಂದ ನಾವು ಜಿಲ್ಲಾ ಪೊಲೀಸರಿಗೆ ವಾರ್ಷಿಕ ಹೆಲ್ತ್ ಚೆಕ್ ಅಪ್ ಅನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಪೊಲೀಸರ ಒತ್ತಡದ ಕೆಲಸ ನಡುವೆ ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು. ಮುಂದಿನ ದಿನಗಳಲ್ಲೂ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು,” ಎಂದು ಭರವಸೆ ನೀಡಿದರು.

ನೂತನ ವಾಹನವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಶಿವಮೊಗ್ಗ ಎಸ್.ಪಿ. ನಿಖಿಲ್ :

ನೂತನ ವಾಹನವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಶಿವಮೊಗ್ಗ ಎಸ್.ಪಿ. ನಿಖಿಲ್ ಅವರು, “ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ಮೂಲಭೂತ ಸೌಕರ್ಯಗಳ ಸೇರ್ಪಡೆ ಅತ್ಯಗತ್ಯ. ಸಾರ್ವಜನಿಕರ ರಕ್ಷಣೆಗೆ ನಮ್ಮ ಸಿಬ್ಬಂದಿ ಸದಾ ಸಿದ್ಧರಿದ್ದು, ಈ ಹೊಸ ವಾಹನದಿಂದ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆಯನ್ನು (Beat System) ಮತ್ತಷ್ಟು ಚುರುಕುಗೊಳಿಸಲಾಗುವುದು. ಜಯನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಡಿ.ಸಿ ಆಫೀಸ್, ನ್ಯಾಯಾಲಯ, ಸರ್ಕಾರಿ ಕಚೇರಿಗಳು ಇರುವುದರಿಂದ ಠಾಣೆಗೆ ವಾಹನ ಅವಶ್ಯಕತೆ ಇತ್ತು. ಇಲಾಖೆಯ ಬೇಡಿಕೆಗೆ ತಕ್ಷಣ ಸ್ಪಂದಿಸಿ ತಮ್ಮ ಅನುದಾನದಲ್ಲಿ ವಾಹನ ಒದಗಿಸಿದ ಡಾ. ಧನಂಜಯ ಸರ್ಜಿ ಅವರಿಗೆ ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಧನ್ಯವಾದಗಳು,” ಎಂದು ತಿಳಿಸಿದರು.

ಈ ವೇಳೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಡಿ.ವೈ.ಎಸ್.ಪಿ ಸಂಜೀವ್ ಕುಮಾರ್, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಅನಿಲ್ , ಪ್ರಮುಖರಾದ ಬೇಡರ ಹೊಸಹಳ್ಳಿ ಸಂದೀಪ್ , ಗಿರೀಶ್ ಮಲ್ಲಾಪುರ, ಶುಭಕರ್, ಸಂತೆಕಡೂರು ಹರೀಶ್, ರೇಣುಕಾರಾಧ್ಯ , ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್ ಕುಲಕರ್ಣಿ, ವೈದ್ಯರಾದ ಡಾ. ವಿಜಯ ಕುಮಾರ ಮಾಯೆರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I