Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I
ಸೂರ್ಯಗಗನ

I ಜೂನ್ 28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ I ಯಶಸ್ಸಿಗೆ ಕಟ್ಟುನಿಟ್ಟಿನ ಸೂಚನೆ : ಅಭಿಷೇಕ್.ವಿ I

I ಜೂನ್ 28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ I ಯಶಸ್ಸಿಗೆ ಕಟ್ಟುನಿಟ್ಟಿನ ಸೂಚನೆ : ಅಭಿಷೇಕ್.ವಿ I ಶಿವಮೊಗ್ಗ : ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮುಂಬರುವ ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನವನ್ನು…

I ಜೂನ್ 28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ I ಯಶಸ್ಸಿಗೆ ಕಟ್ಟುನಿಟ್ಟಿನ ಸೂಚನೆ : ಅಭಿಷೇಕ್.ವಿ I

ಶಿವಮೊಗ್ಗ : ಜಿಲ್ಲೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮುಂಬರುವ ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚಿಸಿದರು.


ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಪ್ರಥಮ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.

ಜೂನ್ 28ರ ಭಾನುವಾರ ಬೆಳಿಗ್ಗೆ 8 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಜಿಲ್ಲಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಗ್ರಾ.ಪಂ ಕಾರ್ಯದರ್ಶಿಗಳು ಮತ್ತು ಗ್ರಾಮ ಲೆಕ್ಕಿಗರು ಸಕ್ರಿಯವಾಗಿ ಸಹಕರಿಸಬೇಕು ಎಂದರು.ಕೇಂದ್ರಗಳ ವ್ಯವಸ್ಥೆ: ಪೋಲಿಯೋ ಬೂತ್‌ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.

ನಗರ ವ್ಯಾಪ್ತಿಯಲ್ಲಿ ಉಸ್ತುವಾರಿ: ನಗರ ಪ್ರದೇಶಗಳಲ್ಲಿ ಕಾರ್ಯಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಸಭೆ/ಪುರಸಭೆಗಳ ಮುಖ್ಯ ಅಧಿಕಾರಿಗಳು ಆಯಾ ತಾಲೂಕಿನ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜವಾಬ್ದಾರಿ ನಿರ್ವಹಿಸಬೇಕು.

ಸಾರಿಗೆ ಮತ್ತು ಮೂಲಸೌಕರ್ಯ: ಲಸಿಕಾ ಅಭಿಯಾನದ ಸುಗಮ ಸಂಚಾರಕ್ಕಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಜೀಪುಗಳ ವ್ಯವಸ್ಥೆ ಮಾಡಬೇಕು. ಹಾಗೂ ಜೂನ್ 27ರಿಂದ ಜುಲೈ 1 ರವರೆಗೆ ಜಿಲ್ಲಾದ್ಯಂತ ನಿರಂತರ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಲು ಮೆಸ್ಕಾಂ ಗೆ ಸೂಚಿಸಿದರು.
ಧಾರ್ಮಿಕ ಮತ್ತು ವಿವಿಧ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಾ.ಪಂ.ಇಓ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಹಾಗೂ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಮಾಹಿತಿ, ಶಿಕ್ಷಣ ಮತ್ತು ಸಂಪರ್ಕ (ಐಇಸಿ) ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಕಸ ವಿಲೇವಾರಿ ವಾಹನಗಳಲ್ಲಿ ಆಡಿಯೋ ಜಿಂಗಲ್ಸ್ ನುಡಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಇ ಗಳು ಮೇಲ್ವಿಚಾರಣೆ ಮಾಡಬೇಕು. ನಗರಾಭಿವೃದ್ಧಿ ಇಲಾಖೆಯಿಂದ ನಗರ ಟಾಸ್ಕ್ಫೋರ್ಸ್ ಸಭೆ ನಡೆಸಿ ಬ್ಯಾನರ್, ಪೋಸ್ಟರ್ ಮೂಲಕ ಪ್ರಚಾರ ನೀಡಬೇಕು. ಹಾಗೂ ಎಲ್ಲರೂ ಕೈಜೋಡಿಸಿ ಜಿಲ್ಲೆಯಲ್ಲಿ ಶೇ.100 ರಷ್ಟು ಪೋಲಿಯೋ ಲಸಿಕೆಯನ್ನು ಹಾಕುವ ಮೂಲಕ ಅಭಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಅಂದು ಎಲ್ಲಾ ಶಾಲೆಗಳನ್ನು ಪೋಲಿಯೋ ಲಸಿಕೆ ನೀಡಲು ತೆರೆದಿರಬೇಕು. ಹಿಂದಿನ ದಿನವೇ ಮಕ್ಕಳಿಂದ ಜಾಥಾ ನಡೆಸಿ ಸುತ್ತಮುತ್ತ ಜಾಗೃತಿ ಮೂಡಿಸಬೇಕು. ಕಾರ್ಮಿಕ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಅಭಿಯಾನ ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದರು.

ಆರ್ ಸಿ ಹೆಚ್ ಓ ಡಾ. ಮಲ್ಲಪ್ಪ ಮಾತನಾಡಿ, ಭಾರತ ದೇಶವು 2014 ರಿಂದ ಪೋಲಿಯೋ ಮುಕ್ತವಾಗಿದೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬAದಿತ್ತು. ಪಾಕಿಸ್ತಾನ ಮತ್ತು ಅಘ್ತಾನಿಸ್ತಾನದಲ್ಲಿ ಒಂದೆರಡು ಪ್ರಕರಣಗಳಿದ್ದು ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುತ್ತಿದೆ.

ಜಿಲ್ಲೆಯಲ್ಲಿ 4,39,013 ಮನೆಗಳಿಂದ 123388 ಮಕ್ಕಳನ್ನು ಪೋಲಿಯೋ ಲಸಿಕೆ ನೀಡಲು ಗುರುತಿಸಲಾಗಿದೆ. ಟ್ರಾನ್ಸಿಟ್, ಮೊಬೈಲ್ ಸೇರಿ ಒಟ್ಟು 1069 ಬೂತ್‌ಗಳು ಅಂದು ಕಾರ್ಯ ನಿರ್ವಹಿಸಲಿವೆ. 3960 ಲಸಿಕಾ ಕಾರ್ಯಕರ್ತರಿದ್ದು, ಬೂತ್‌ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29 ಮತ್ತು 30 ರಂದು ಗ್ರಾಮೀಣ ಭಾಗದಲ್ಲಿ ಹಾಗೂ ಜುಲೈ 1 ರಂದು ನಗರ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಹಾಗೂ ಇತೆರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗುವುದು ಎಂದರು

ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಡಿಹೆಚ್ ಓ ಡಾ.ನಟರಾಜ್, ಡಿಎಸ್ ಓ ಡಾ.ನಾಗರಾಜ್ ನಾಯ್ಕ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ, ಇತರೆ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.

Gara Srinivas

Gara Srinivas

Leave a comment

error: Content is protected !!