Monday, 2 November 2026 — Suryagagana
08:06 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ I ಸಾರ್ವಜನಿಕರಿಗೆ ಎಚ್ಚರಿಕೆ I

I ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ I ಸಾರ್ವಜನಿಕರಿಗೆ ಎಚ್ಚರಿಕೆ I ಶಿವಮೊಗ್ಗ,: ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

I ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ I ಸಾರ್ವಜನಿಕರಿಗೆ ಎಚ್ಚರಿಕೆ I

ಶಿವಮೊಗ್ಗ,: ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿದ್ದಾನೆ. ಅದರಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಪದವನ್ನು ಮುದ್ರಿಸಿ, ಸುಮಾರು 150 ಕ್ಕಿಂತಲೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣವನ್ನು ಪಡೆದು ವಂಚಿಸಿರುವುದು ತಿಳಿದುಬಂದಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬಳಸಿಕೊಂಡು ಸಾಲ ಮಂಜೂರು ಮಾಡಿಸಿಕೊಡುವುದಾಗಿ ಅಥವಾ ಸಾಲ ಮಂಜೂರು ಮಾಡಿಸಲು ಹಣದ ಆಮಿಷ ಒಡ್ಡಿ ಈ ವ್ಯಕ್ತಿ ವಂಚನೆಗೆ ಯತ್ನಿಸುತ್ತಿದ್ದಾನೆ. ಆದ್ದರಿಂದ ಸಾರ್ವಜನಿಕರು ಯಾರೂ ಕೂಡ ಈತನಿಗೆ ಹಣವನ್ನು ನೀಡಬಾರದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ವ್ಯಕ್ತಿಯೊಂದಿಗೆ ನಿಗಮವು ಯಾವುದೇ ಯೋಜನೆಯ ಬಗ್ಗೆ ಪತ್ರ ವ್ಯವಹಾರಗಳನ್ನು ಮಾಡಿಲ್ಲ. ಹಾಗೂ ಈ ವ್ಯಕ್ತಿಗೂ ನಮ್ಮ ನಿಗಮಕ್ಕೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಜಿಲ್ಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕು ಎಂದು ವಿನಂತಿಸಿದ್ದಾರೆ.

Gara

Gara

Leave a comment

error: Content is protected !!