Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ I ಸಾರ್ವಜನಿಕರಿಗೆ ಎಚ್ಚರಿಕೆ I

I ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ I ಸಾರ್ವಜನಿಕರಿಗೆ ಎಚ್ಚರಿಕೆ I ಶಿವಮೊಗ್ಗ,: ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

I ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ I ಸಾರ್ವಜನಿಕರಿಗೆ ಎಚ್ಚರಿಕೆ I

ಶಿವಮೊಗ್ಗ,: ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿದ್ದಾನೆ. ಅದರಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಪದವನ್ನು ಮುದ್ರಿಸಿ, ಸುಮಾರು 150 ಕ್ಕಿಂತಲೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣವನ್ನು ಪಡೆದು ವಂಚಿಸಿರುವುದು ತಿಳಿದುಬಂದಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬಳಸಿಕೊಂಡು ಸಾಲ ಮಂಜೂರು ಮಾಡಿಸಿಕೊಡುವುದಾಗಿ ಅಥವಾ ಸಾಲ ಮಂಜೂರು ಮಾಡಿಸಲು ಹಣದ ಆಮಿಷ ಒಡ್ಡಿ ಈ ವ್ಯಕ್ತಿ ವಂಚನೆಗೆ ಯತ್ನಿಸುತ್ತಿದ್ದಾನೆ. ಆದ್ದರಿಂದ ಸಾರ್ವಜನಿಕರು ಯಾರೂ ಕೂಡ ಈತನಿಗೆ ಹಣವನ್ನು ನೀಡಬಾರದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ವ್ಯಕ್ತಿಯೊಂದಿಗೆ ನಿಗಮವು ಯಾವುದೇ ಯೋಜನೆಯ ಬಗ್ಗೆ ಪತ್ರ ವ್ಯವಹಾರಗಳನ್ನು ಮಾಡಿಲ್ಲ. ಹಾಗೂ ಈ ವ್ಯಕ್ತಿಗೂ ನಮ್ಮ ನಿಗಮಕ್ಕೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಜಿಲ್ಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕು ಎಂದು ವಿನಂತಿಸಿದ್ದಾರೆ.

Gara Srinivas

Gara Srinivas

Leave a comment

error: Content is protected !!