Sunday, August 2, 2026
Homeಸೂರ್ಯಗಗನI ಪತ್ರಕರ್ತರ ಸಮುದಾಯಕ್ಕೆ ತಗಡೂರರ ಸೇವೆ ಅನನ್ಯ I ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ...

I ಪತ್ರಕರ್ತರ ಸಮುದಾಯಕ್ಕೆ ತಗಡೂರರ ಸೇವೆ ಅನನ್ಯ I ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶ್ಲಾಘನೆ I

I ಪತ್ರಕರ್ತರ ಸಮುದಾಯಕ್ಕೆ ತಗಡೂರರ ಸೇವೆ ಅನನ್ಯ I ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶ್ಲಾಘನೆ I

ಬೆಂಗಳೂರು : ಪತ್ರಕರ್ತರ ಸಮುದಾಯಕ್ಕೆ ಧ್ವನಿಯಾಗಿ ದುಡಿಯುತ್ತಿರುವ ಮತ್ತು ವಿಶೇಷವಾಗಿ ಕೋವಿಡ್ ಕಾಲಘಟ್ಟದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಸಲ್ಲಿಸಿದ ಸೇವೆ ಶ್ಲಾಘನೀಯ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ ಅವರು ಸ್ಮರಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಮಾಧ್ಯಮ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನಾಧ್ಯಕ್ಷರಾದ ನಾಡೋಜ ಗೊ.ರು. ಚನ್ನಬಸಪ್ಪ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶಿವಾನಂದ ತಗಡೂರು ಅವರನ್ನು ಅಭಿನಂದಿಸಿದರು.
 
ಈ ಸಂದರ್ಭದಲ್ಲಿ ಶ್ರೀ ಚನ್ನಬಸವ ಸ್ವಾಮೀಜಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ, ಡಾ. ಅವಿನಾಶ್ ಕವಿ, ಪಾಲನೇತ್ರ ಸೇರಿದಂತೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಗಣ್ಯರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I