Sunday, August 2, 2026
Homeಸೂರ್ಯಗಗನI ಸುರಕ್ಷಿತ ಸಿಟಿ ಬಸ್ ಸೇವೆಗೆ I ಶಿವಮೊಗ್ಗ ಜಿಲ್ಲಾ ಪೊಲೀಸ್‌ ವತಿಯಿಂದ ಮಹತ್ವದ ಹೆಜ್ಜೆ...

I ಸುರಕ್ಷಿತ ಸಿಟಿ ಬಸ್ ಸೇವೆಗೆ I ಶಿವಮೊಗ್ಗ ಜಿಲ್ಲಾ ಪೊಲೀಸ್‌ ವತಿಯಿಂದ ಮಹತ್ವದ ಹೆಜ್ಜೆ I

I ಸುರಕ್ಷಿತ ಸಿಟಿ ಬಸ್ ಸೇವೆಗೆ I ಶಿವಮೊಗ್ಗ ಜಿಲ್ಲಾ ಪೊಲೀಸ್‌ ವತಿಯಿಂದ ಮಹತ್ವದ ಹೆಜ್ಜೆ I

ಶಿವಮೊಗ್ಗ : ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಎಲ್ಲಾ ಸಿಟಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಂಜೀವ್ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಉಪವಿಭಾಗ ಅವರು ಭಾಗವಹಿಸಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರ ಸಮಸ್ಯೆಗಳು ಮತ್ತು ಸಲಹೆಗಳನ್ನು ಆಲಿಸಿ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಹತ್ವದ ಸೂಚನೆಗಳನ್ನು ನೀಡಿದರು.

ಮುಖ್ಯ ಸೂಚನೆಗಳು: ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.
ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವಂತೆ ಸೂಚಿಸಲಾಯಿತು.

ಅಲ್ಲದೆ, ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ ಸಮಸ್ಯೆಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ “Public Eye”, ಶಿವಮೊಗ್ಗ ಸಂಚಾರ ಪೊಲೀಸ್ ಸಹಾಯವಾಣಿ ಹಾಗೂ ಪೊಲೀಸ್ ತುರ್ತು ಸಹಾಯವಾಣಿ (112) ಸಂಖ್ಯೆಗಳಿರುವ ಜಾಗೃತಿ ಪೋಸ್ಟರ್‌ಗಳನ್ನು ಸಿಟಿ ಬಸ್‌ಗಳಲ್ಲಿ ಅಳವಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I