Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I

I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I   ಶಿವಮೊಗ್ಗ : ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ಒಂದು ಒಂದು ಸೇವಾ ಸಂಸ್ಥೆಯಾಗಿದೆ ಎಂದು…
I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I
  ಶಿವಮೊಗ್ಗ : ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ಒಂದು ಒಂದು ಸೇವಾ ಸಂಸ್ಥೆಯಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಅಧ್ಯಕ್ಷ ಶೇಷಗಿರಿ ಡಿ.ಕೆ. ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಎಜುಕೆಷನ್ ಅಂಡ್ ಚಾರಿಟಬಲ್ ಟ್ರಸ್ಟ್ (ರಿ) ರೋಟರಿ ಪೂರ್ವ ಇಂಗ್ಲೀಷ್ ಹೈಸ್ಕೂಲ್, ರಾಜೇಂದ್ರ ನಗರ, ಶಿವಮೊಗ್ಗ ಇವರು ಏರ್ಪಡಿಸಿದ್ದ ರೋಟರಿ ಇಂಟರಾಕ್ಟ್ ಕ್ಲಬ್ 2026-27 ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣವನ್ನು ಬೆಳೆಸುವ ರೋಟರಿ ಇಂಟರಾಕ್ಟ್ ಕ್ಲಬ್ ಒಂದು ಸೇವಾ ಸಂಸ್ಥೆಯಾಗಿದ್ದು, ಇದು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶಗಳನ್ನು ಒದಗಿಸುತ್ತದೆ ಎಂದರು.
ಇಂಟರಾಕ್ಟ್ ಕ್ಲಬ್ ಮಹತ್ವದ ಬಗ್ಗೆ ವಿವರಿಸುತ್ತಾ ಇದರ ಮುಖಾಂತರ ನೀವುಗಳು ನಾಯಕತ್ವ ಕೌಶಲ್ಯಗಳನ್ನು ಬೆಳೆಸಬಹುದು, ಟೀಂ ವರ್ಕ್ ಕಲಿಯಬಹುದು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು, ಇದು ಕೇವಲ ಕ್ಲಬ್ ಅಲ್ಲ-ಇದು ವ್ಯಕ್ತಿತ್ವ ನಿರ್ಮಾಣದ ಮಾರ್ಗವಾಗಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್ ಮಾತನಾಡಿ, ಇಂಟರಾಕ್ಟ್ ಕ್ಲಬ್ ಎಂಬುದು 12 ರಿಂದ 18 ವರ್ಷ ವಯಸ್ಸಿನ ಯುವಕರಿಗಾಗಿ ಸ್ಥಳೀಯ ರೋಟರಿ ಕ್ಲಬ್ ಗಳಿಂದ ಪ್ರಾಯೋಜಿಸಲ್ಪಟ್ಟ ಒಂದು ಸೇವಾ ಮತ್ತು ನಾಯಕತ್ವ ಸಂಸ್ಥೆಯಾಗಿದೆ. ಈ ಕ್ಲಬ್ ಗಳು ಸ್ವ-ಆಡಳಿತ ನಡೆಸುತ್ತಿದ್ದು, ವಾರ್ಷಿಕವಾಗಿ ಕನಿಷ್ಠ ಎರಡು ಪ್ರಮುಖ ಸೇವಾ ಯೋಜನೆಗಳನ್ನು ಕಾರ್ಯಗತಗೊಳಿಸುತ್ತವೆ. ಒಂದು ಅವರ ಸ್ಥಳೀಯ ಸಮುದಾಯಕ್ಕೆ ಪ್ರಯೋಜನಕಾರಿ ಮತ್ತು ಇನ್ನೊಂದು ಅಂತರರಾಷ್ಟ್ರೀಯ ತಿಳುವಳಿಕೆಯನ್ನು ಉತ್ತೇಜಿಸುತ್ತದೆ. ಯೋಜನೆಗಳು ಸಾಮಾನ್ಯವಾಗಿ ಶಿಕ್ಷಣ, ಪರಿಸರ ಸುಸ್ಥಿರತೆ ಮತ್ತು ಸಾರ್ವಜನಿಕ ಆರೋಗ್ಯದಂತಹ ಸ್ಥಳೀಯ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತವೆ ಎಂದು ಅಭಿಮತ ವ್ಯಕ್ತಪಡಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ಕಾರ್ಯದರ್ಶಿಯಾದ ಆರ್.ಮನೋಹರ ಮಾತನಾಡಿ, ಈ ಕಾರ್ಯಕ್ರಮವು ರೋಟರಿಯ ಧ್ಯೇಯವಾಕ್ಯವಾದ “ಸ್ವಯಂ ಸೇವೆಗಿಂತ ಮೇಲ್ಪಟ್ಟು ಸೇವೆ”ಯನ್ನು ಆಧರಿಸಿದೆ. ಇದು ಶಾಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸಮಗ್ರತೆ, ವೈಯಕ್ತಿಕ ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದ ಬಗ್ಗೆ ಕಲಿಸುತ್ತದೆ. ಈ ಇಂಟರಾಕ್ಟ್ ಕ್ಲಬ್ ವೇದಿಕೆಯನ್ನು ರೂಪಿಸಿರುವ ಶಾಲೆಯ ಎಲ್ಲಾ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಸಿಬ್ಬಂದಿಗೆ, ಹಾಗೂ ರೋಟರಿ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದರು.
ಈ ಸಂದಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಡಿಕ್ಷನರಿ, ಪೆನ್, ನೋಟ್ ಬುಕ್ ಅನ್ನು ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ನ ವತಿಯಿಂದ ಪದಾಧಿಕಾರಿಗಳು ವಿತರಿಸಿದರು. ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ್, ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಶಾಲಾ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
Gara Srinivas

Gara Srinivas

Leave a comment

error: Content is protected !!