Sunday, August 2, 2026
Homeಸೂರ್ಯಗಗನI ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ...

I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಆಗ್ರಹ I

I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಆಗ್ರಹ I

ಶಿವಮೊಗ್ಗ:  ಕರೋನಾ ಲಾಕ್‌ಡೌನ್ ಅವಧಿಯನ್ನು ದುರ್ಬಳಕೆ ಮಾಡಿಕೊಂಡು ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆದಿರುವ ಸರ್ಕಾರಿ ಜಮೀನುಗಳು, ಗೋಮಾಳ, ಕೆರೆ,ಬಾ.ಖರಾಬು, ಸರ್ಕಾರಿ.ಕಟ್ಟೆ ಹಾಗೂ ಜಲಮೂಲಗಳ ಒತ್ತುವರಿ, ಡಿ-ಚುಕ್ಕಿ ಪತ್ರಗಳ ದುರ್ಬಳಕೆ ಮತ್ತು ನಕಲಿ ಖಾತೆ, ಬದಲಾವಣೆಗಳ ವಿರುದ್ಧ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಭೂಮಾಪನ ಇಲಾಖೆಯ ಆಯುಕ್ತರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಿತು,

ಕರೋನಾ ಸಂಕಷ್ಟದ ಸಮಯದಲ್ಲಿ ಪ್ರಭಾವಶಾಲಿ ಭೂ ಮಾಫಿಯಾ ಹಾಗೂ ಕೆಲ ಅಧಿಕಾರಿಗಳ ಶಾಮೀಲಿನಿಂದ ಸರ್ಕಾರಿ ಆಸ್ತಿಗಳು ಅಕ್ರಮವಾಗಿ ಖಾಸಗಿಯವರ ಪಾಲಾಗಿವೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಬಿ.ಎನ್.ಎಸ್ , ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಹಾಗೂ ವಿಶೇಷ ತನಿಖಾ ತಂಡವನ್ನು (Special Task Force) ರಚಿಸಬೇಕು ಎಂದು ಸಂಘಟನೆಯು ಉನ್ನತ ಮಟ್ಟದಲ್ಲಿ ಆಗ್ರಹಿಸಿದೆ.

ಒಂದು ವೇಳೆ ಆಡಳಿತ ಯಂತ್ರವು ಇದರ ವಿರುದ್ಧ ತುರ್ತಾಗಿ ಕ್ರಮ ಕೈಗೊಳ್ಳದಿದ್ದಲ್ಲಿ, ಮುಂದಿನ ದಿನಗಳಲ್ಲಿ ಕಾನೂನು ಹೋರಾಟದ ಹಮ್ಮಿಕೊಳ್ಳಲಾಗುವುದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲು ಬದ್ಧರಾಗಿರುತ್ತೇವೆ ಎಂದು ತಿಳಿಸಿ ಮನವಿಯನ್ನು ನೀಡಲಾಗಿದೆ ಸರ್ಕಾರದ ಸುತ್ತೋಲೆಯಂತೆ ಜಿಲ್ಲೆಯ ಕೆರೆ-ಕಂಟೆ ಹಾಗೂ ಜಲಮೂಲಗಳನ್ನು ರಕ್ಷಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್‌ನ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ. ಸಿಬ್ಗತ್ಉಲ್ಲಾ, ರಾಜ್ಯದ ಪದಾಧಿಕಾರಿಗಳಾದ ದೇವರಾಜ್, ಲೋಕೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I