I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I
ತೀರ್ಥಹಳ್ಳಿ : ಗುಡ್ಡ ಕುಸಿದು ಮೂವರು ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡೆದಿದೆ..
ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ.. ಗುಡ್ಡದ ಕೆಳಭಾಗದಲ್ಲಿ ಷ
ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಸಹ ಸಾವನ್ನಪ್ಪಿದ್ದಾರೆ..
ಮೃತಪಟ್ಟವರನ್ನ ಕೊಕ್ಕರೆಗಾರು ಗ್ರಾಮ ಗಂಗಾವತಿ ತಾಲೂಕು ಕೊಪ್ಪಳ ಜಿಲ್ಲೆ ಮಲ್ಲಿಕಾರ್ಜುನ (35 ವರ್ಷ ) ನಾಗವೇಣಿ (28 ವರ್ಷ ), ಸಂತೋಷ 3 ( ವರ್ಷ ) ಎಂದು ಗುರುತಿಸಲಾಗಿದೆ..
ಪಕ್ಕದ ಶೆಡ್ ನಲ್ಲಿದ್ದ ಹನುಮಂತ (31 ವರ್ಷ ) ಗಂಭೀರ ಗಾಯವಾಗಿದ್ದು ಅವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ..
ರಾತ್ರಿ ಸುಮಾರು 2.30ರ ಹೊತ್ತಿಗೆ ಏಕಾಏಕಿ ಮಣ್ಣು ಜರಿದು, ತಡೆಗೋಡೆ ಮನೆಗಳ ಮೇಲೆ ಕುಸಿದಿದೆ. ಇದರಡಿ ಸಿಲುಕಿ ಮನೆಯಲ್ಲಿದ್ದವರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಕಾರ್ಯಾಚರಣೆ ನಡೆಸಿ ಉಳಿದವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ಗಾಂಧಿನಗರ ವಾರ್ಡ್ ವ್ಯಾಪ್ತಿಗೆ ಬರುವ ಇಂದಿರಾನಗರವು ಗುಡ್ಡಗಾಡು ಪ್ರದೇಶವಾಗಿದ್ದು, ಇಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸವಿದ್ದಾರೆ. ವಿವಿಧ ಜಿಲ್ಲೆಗಳಿಂದ ವಲಸೆ ಬಂದಿದ್ದ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ಈ ಬಡಾವಣೆಯಲ್ಲಿ ವಾಸವಾಗಿವೆ. ಗೋಡೆ ಕುಸಿದ ಸ್ಥಳದ ಸುತ್ತಮುತ್ತ ಹೊಸಪೇಟೆಯ 15 ಹಾಗೂ ದಾವಣಗೆರೆಯ 5 ಮಂದಿ ವಾಸವಿದ್ದರು. ಇವರೆಲ್ಲರೂ ಬಂಡೆ ಲೋಡರ್ಸ್ ಕೆಲಸಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಈ ಭಾಗದಲ್ಲಿ ಗುಡ್ಡ ಕುಸಿತ ತಡೆಯುವ ಮುನ್ನೆಚ್ಚರಿಕೆಯಾಗಿ ಇಲ್ಲಿ ಸುಮಾರು 60 ಅಡಿ ಉದ್ದದ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ, ನಿರಂತರ ಮಳೆಯಿಂದ ತಡೆಗೋಡೆ ಧರೆಗೆಗುರುಳಿ ಈ ದುರಂತ ಸಂಭವಿಸಿದೆ. ಘಟನೆ ಸಂಭವಿಸಿದ ತಕ್ಷಣವೇ ಎಚ್ಚೆತ್ತ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತ್ ಒಟ್ಟು 17 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ..
ಇನ್ನು ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಮೂವರನ್ನು ಹೊರ ತೆಗೆಯಲು ಬೆಳಗ್ಗೆ 5.30 ಕ್ಕೆ ಆರಂಭವಾದ ಕಾರ್ಯಾಚರಣೆ ಮಧ್ಯಾಹ್ನ ಒಂದು ಗಂಟೆಯವರೆಗೆ ನಡೆದಿದ್ದು, ಕಡೆಗೂ ಮೂವರ ಶವ ಪತ್ತೆಯಾಗಿದೆ.. ಮೂವರ ಶವವನ್ನು ತೀರ್ಥಹಳ್ಳಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ.. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ


