Thursday, 17 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden
ಸೂರ್ಯಗಗನ

I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I

I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ತೀರ್ಥಹಳ್ಳಿ : ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶನಿವಾರ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದು ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.. ಈ ಹಿನ್ನಲೆಯಲ್ಲಿ ಯು…

I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I

ತೀರ್ಥಹಳ್ಳಿ : ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶನಿವಾರ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದು ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ..

ಈ ಹಿನ್ನಲೆಯಲ್ಲಿ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಈಗಾಗಲೇ ಎಲ್ಲಾ ತಯಾರಿ ನಡೆಸುತ್ತಿದ್ದು ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ತಾಲೂಕಿನ ಅತಿ ಹೆಚ್ಚು ಗ್ರಾಮ ಕಸ್ತೂರಿ ರಂಗನ್ ವರದಿಯಲ್ಲಿ ಸೇರ್ಪಡೆಯಾಗಿರುವುದರಿಂದ ಈ ಸಭೆ ಅನಿವಾರ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಭೇಟಿ ನೀಡುತ್ತಿದ್ದು ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಲಿದೆ. ಪಶ್ಚಿಮಘಟ್ಟದ ಸಮಸ್ಯೆಯನ್ನು ಅವರ ಜೊತೆಗೆ ಸಂವಾದ ನಡೆಸಿ ಕೆಲವು ವಿಷಯಗಳನ್ನು ಅವರ ಗಮನಕ್ಕೆ ತರುವುದು ನಮಗೆ ಅನಿವಾರ್ಯವಾಗಿದೆ.. ಈ ಕಾರ್ಯಕ್ರಮ ಕಸ್ತೂರಿರಂಗನ್ ವರದಿ ವಿಚಾರಕ್ಕೆ ಮಾತ್ರ ಸೀಮಿತವಾಗಿರುತ್ತದೆ ಬೇರೆ ಯಾವುದೇ ವಿಷಯಗಳು ಈ ಕಾರ್ಯಕ್ರಮದಲ್ಲಿ ಬರುವುದಿಲ್ಲ ಎಂದು ತಿಳಿಸಿದರು.. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು ನನ್ನ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಿರಲಿದೆ. ದಯವಿಟ್ಟು ಪ್ರತಿಯೊಬ್ಬ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆ ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆದಿದೆ.. ಹೆಲಿಪ್ಯಾಡ್ ಮೂಲಕ ಆಗಮಿಸುವ ಅವರು ರಾಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ ಆನಂತರ ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕಾರ್ಯಕ್ರಮದಲ್ಲಿ ಸಂವಾದ ನಡೆಯಲಿದೆ. ಇಲ್ಲಿನ ಸಂವಾದ ಪ್ರಾಮುಖ್ಯತೆ ಪಡೆದಿರುತ್ತದೆ. ಇಲ್ಲಿ ನಡೆಯುವ ಪ್ರತಿಯೊಂದು ಚರ್ಚೆ ಸೋಮವಾರ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪವಾಗಲಿದೆ.. ಹಾಗಾಗಿ ಈ ಕಾರ್ಯಕ್ರಮ ಮಹತ್ವಪೂರ್ಣದ್ದಾಗಿದೆ.. ಮುಖ್ಯಮಂತ್ರಿಗಳು ಇಲ್ಲಿಂದ ಬಾಳೆಹೊನ್ನೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು..

ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಮಾತನಾಡಿ ಎರಡು ಎಸ್ ಪಿ, 5 ಡಿವೈಎಸ್ ಪಿ, 46 ಪೊಲೀಸ್ ಸಬ್ ಇನ್ಸ್ಪೆಕ್ಟರ್, 750 ಸಿಬ್ಬಂದಿಗಳು ನೇಮಕವಾಗಿದ್ದಾರೆ.. ಟ್ರಾಫಿಕ್ ನಿಯಂತ್ರಣಕ್ಕೆ ಈಗಾಗಲೇ ರೂಪುರೆಷೆ ತಯಾರಿ ಮಾಡಿದ್ದೇವೆ.. ಪಾರ್ಕಿಂಗ್ ವ್ಯವಸ್ಥೆಗೆ ಕೂಡ ಮಾಡಲಾಗಿದೆ.. 10 ಕಡೆ ಚೆಕಿಂಗ್ ಪಾಯಿಂಟ್ ಮಾಡಿಕೊಂಡಿದ್ದೇವೆ. ಸರಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.. ಈಗಾಗಲೇ ಎಲ್ಲಾ ತಯಾರಿ ನಡೆದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಉಪವಿಭಾಗಧಿಕಾರಿ ಮೈತ್ರಿ, ತಹಸೀಲ್ದಾರ್ ರಂಜಿತ್, ಎಎಸ್ ಪಿ ಭಾನುಪ್ರಕಾಶ್, ಅಗ್ನಿಶಾಮಕ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿ ಹಲವು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Gara Srinivas

Gara Srinivas

Leave a comment

error: Content is protected !!